Advertisement
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರದಿಂದ ಅಧಿವೇಶನ ನಡೆಯಲಿದೆ. ಸೋಮವಾರ ಮತ್ತು ಮಂಗಳವಾರ ಇನ್ನೂ ಹಲವು ಇಲಾಖೆಗಳ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದರು.
Related Articles
Advertisement
ಎರಡು ವಿಧೇಯಕಗಳ ಸ್ವೀಕಾರ: ಸ್ಪೀಕರ್ :
ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮಂಡನೆ ಸಲುವಾಗಿ ಕರ್ನಾಟಕ ಮುದ್ರಾಂಕ (ತಿದ್ದುಪಡಿ) ಮಸೂದೆ ಮತ್ತು ಅಪರಾಧ ಕಾನೂನು (ತಿದ್ದುಪಡಿ) ವಿಧೇಯಕ ಸ್ವೀಕರಿಸಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2062 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಸದಸ್ಯರು ಕೇಳಿದ ಪ್ರಶ್ನೆಗಳನ್ನು ಮತ್ತು ಅದಕ್ಕೆ ಸಚಿವರು ನೀಡಿದ ಉತ್ತರವನ್ನು ಅಂತರ್ಜಾಲ ತಾಣದಲ್ಲಿ ಅಪ್‌ಲೋಡ್ ಮಾಡಲು ಹಾಗೂ ಇಮೇಲ್ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಜ್ಯಪಾಲರು ವಿಧಾನಸೌಧದ ಭವ್ಯವಾದ ಮೆಟ್ಟಿಲುಗಳನ್ನು ಏರಿ ಅಧಿವೇಶನಕ್ಕೆ ಆಗಮಿಸಲಿದ್ದಾರೆ. ಈ ಸಂಪ್ರದಾಯ ವಿವಿಧ ಕಾರಣಗಳಿಂದ ನಿಂತು ಹೋಗಿತ್ತು. ಈಗ ಹಿಂದೆ ಚಾಲ್ತಿಯಲ್ಲಿದ್ದ ರೀತಿಯಲ್ಲೇ ಸದನಕ್ಕೆ ಆಗಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದು, ಅವರು ಸಮ್ಮತಿಸಿದ್ದಾರೆಂದು ಹೇಳಿದರು.
ಈ ಮಧ್ಯೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಸಾಂಪ್ರದಾಯಿಕವಾಗಿ ಆಹ್ವಾನಿಸಿದರು.
ಭಿತ್ತಿಪತ್ರ ಪ್ರದರ್ಶಿಸುವಂತಿಲ್ಲ: ಹೊರಟ್ಟಿ:
ಸೋಮವಾರ ರಾಜ್ಯಪಾಲರ ಭಾಷಣದ ಬಳಿಕ ಪರಿಷತ್ ಕಲಾಪ ಆರಂಭವಾಗಲಿದ್ದು, ನಿಯಮ 72ರಡಿ ಚರ್ಚೆ ವೇಳೆ ಸದನದ ಬಾವಿಯಲ್ಲಿ ಭಿತ್ತಿಪತ್ರ ಪ್ರದರ್ಶಿಸುವಂತಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮಗಳ ಪಾಲನೆಗೆ ಎಲ್ಲ ಸದಸ್ಯರಿಗೂ ಸೂಚನೆ ನೀಡಲಾಗಿದೆ. ಮೇಲ್ಮನೆಯ ಮಟ್ಟ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನಿಸಲು ತೀರ್ಮಾನ ಮಾಡಿದ್ದೇವೆ. ಚುನಾವಣ ಸುಧಾರಣೆ ಬಗ್ಗೆ ಎರಡು ದಿನ ಚರ್ಚಿಸುವ ಚಿಂತನೆ ಇದೆ. ಸರಕಾರ ಒಪ್ಪಿಕೊಂಡರೆ ಮಾಡುತ್ತೇವೆ ಎಂದು ಹೇಳಿದರು.