ನವ ದೆಹಲಿ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರಿರುವ ಬೆನ್ನಿಗೆ ದೇಶದ ಮಾರುಕಟ್ಟೆಗೆ ಸಂಪೂರ್ಣ ಪ್ರಮಾಣದಲ್ಲಿ ಎಥೆನಾಲ್ ಮತ್ತು ಗ್ಯೋಸೋಲಿನ್ ಮೂಲಕ ಚಲಿಸುವ ವಾಹನಗಳನ್ನು ಬರುವ ಒಂದು ವರ್ಷದೊಳಗೆ ಬಿಡುಗಡೆಗೊಳಿಸುವಂತೆ ವಾಹನ ಉದ್ಯಮ ಪ್ರತಿನಿಧಿಗಳಿಗೆ ಕೇಂದ್ರ ಸಲಹೆ ನೀಡಿದೆ.
ಇದನ್ನೂ ಓದಿ : ಹಠಾತ್ ಏರಿಕೆ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,625 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ಈ ಕುರಿತಾಗಿ ತಮ್ಮ ಅಧಿಕೃತ ಟ್ವಿಟರ್ ಮೂಲಕ ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೇಶದ ಮಾರುಕಟ್ಟೆಗೆ ಒಂದು ವರ್ಷದೊಳಗೆ ಬಿಡುಗಡೆ ಮಾಡುವಂತೆ ಸಲಹೆ ನೀಡಿದ್ದಾರೆ.
ಇನ್ನು, ಎಲ್ಲಾ ಮಾದರಿಯ ವಾಹನಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಗಳನ್ನು ವಾಹನಗಳಲ್ಲಿ ಅಳವಡಿಸಿ ಎಂದು ಭಾರತೀಯ ಆಟೊಮೊಬೈಲ್ ತಯಾರಕರ ಸಂಘದ (ಎಸ್‌ಐಎಎಂ) ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಕೋರಿದ್ದಾರೆಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಅಂಗಾರ ಗೆ ಸಚಿವ ಸ್ಥಾನ ಬಹತೇಕ ಖಚಿತ .!?