Advertisement
ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಾರ್ವಜನಿಕ ಉಪಯುಕ್ತ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು. ಮಾಹಿತಿ ಕೊರತೆಯಿಂದ ಬಹಳಷ್ಟು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪಂಗಡದವರಿಗಾಗಿ ವಿಶಿಷ್ಟವಾದ ಯೋಜನೆಗಳ ಬಗ್ಗೆ ಸಮುದಾಯಕ್ಕೆ ಸೂಕ್ತ ಮಾಹಿತಿ ನೀಡಬೇಕು. ಸೌಲಭ್ಯ ಪಡೆದುಕೊಳ್ಳಲು ಅಗತ್ಯವಾದ ಮಾರ್ಗದರ್ಶನ ನೀಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಹೇಳಿದರು.
Related Articles
Advertisement
ನಗರಸಭೆ ಆಯುಕ್ತರ ವಿರುದ್ಧ ಕಿಡಿ: ಕಚೇರಿಗೆ ಸಂಬಂಧಪಡದ ವ್ಯಕ್ತಿಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಎದುರಾಗುವ ಸಮಸ್ಯೆಗಳಿಗೆ ನಗರಸಭೆಯ ಪೌರಾಯುಕ್ತರು ನೇರ ಹೊಣೆಗಾರರಾಗಲಿದ್ದಾರೆ ಎಂದು ಎಚ್ಚರಿಸಿದರು.
ಬರಪೀಡಿತ ಪ್ರದೇಶಕ್ಕೆ ಒತ್ತಾಯ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆಯ ತೀವ್ರ ಅಭಾವ ಹೊಂದಿರುವ ಹೊಸಕೋಟೆ ಒಳಗೊಂಡಂತೆ ಇತರೆ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು. ಈ ವೇಳೆ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆ, ಪ್ರಗತಿ ಸಾಧನೆ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ವಿ. ಪ್ರಸಾದ್, ಕೆ.ಕೃಷ್ಣಮೂರ್ತಿ, ಜಯಕುಮಾರಿ ಸೊಣ್ಣಪ್ಪ, ತಾಲೂಕು ಪಂಚಾಯ್ತಿ ಅಧ್ಯಕ್ಷ ವಿ.ಸಿ.ಜಯದೇವಯ್ಯ, ಸದಸ್ಯ ಡಿ.ಟಿ.ವೆಂಕಟೇಶ್, ತಹಶೀಲ್ದಾರ್ ಕೆ.ರಮೇಶ್, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್ ಉಪಸ್ಥಿತರಿದ್ದರು.
ಆಯುಷ್ಮಾನ್ ನೋಂದಣಿಯನ್ನು ತಾಲೂಕಿನಲ್ಲಿ ಚುರುಕುಗೊಳಿಸಿ, ಬಡ ಜನರು ಇದರ ಪ್ರಯೋಜನ ಪಡೆದುಕೊಳ್ಳಲು ಅವಕಾಶ ಮಾಡಿಕೊಡಬೇಕು. ಅರಣ್ಯ ಇಲಾಖೆಯು ರೈತರ ಜಮೀನುಗಳಲ್ಲಿ ನೀಲಗಿರಿಗೆ ಪರ್ಯಾಯವಾಗಿ ಇತರೆ ಸಸಿಗಳನ್ನು ಉಚಿತವಾಗಿ ನೀಡಿ, ಪರಿಸರ ಸಮತೋಲನ ಕಾಪಾಡಬೇಕು.-ಬಿ.ಎನ್.ಬಚ್ಚೇಗೌಡ, ಸಂಸದ