Advertisement

Drought Situation; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಸಚಿವ ಕೆ.ವೆಂಕಟೇಶ

11:35 AM Sep 22, 2023 | Team Udayavani |

ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧ ಹೇರುತ್ತೇವೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿಗೂ ಸೂಚಿಸಲಾಗುವುದು. ಸದ್ಯಕ್ಕೆ ಕುಡಿಯುವ ನೀರಿ‌ನ ಕೊರತೆ ಉಂಟಾಗಿಲ್ಲ‌. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು.

ಕಾವೇರಿ ಜಲವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಂಡನೆ ಮಾಡಿಲ್ಲ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಸಮರ್ಥವಾಗಿ ವಾದ ಮಂಡಿಸಿದೆ. ಆದರೆ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡುವಂತೆ ಆದೇಶಿಸಿದೆ. ಈ ವಿಚಾರದಲ್ಲಿ ನಮ್ಮಲ್ಲಿ ಒಗ್ಗಟ್ಟು ಇದೆ. ಆದರೂ ಕೆಲವರು ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ, ಬಿಸಿ ಕಾಣಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

ಬಿಜೆಪಿ- ಜೆಡಿಎಸ್ ಮೈತ್ರಿ ಹೊಸ ವಿಚಾರವೇನಲ್ಲ. ಇದು ಮೊದಲೇ ಗೊತ್ತಿತ್ತು. ಈ ಮೊದಲೆಲ್ಲಾ ಒಳ ಒಪ್ಪಂದ ಮಾಡಿಕೊಳ್ಳುತ್ತಿದ್ದರು. ಈಗ ಬಹಿರಂಗವಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಇದು ಇಬ್ಬರಿಗೂ ಅನಿವಾರ್ಯವಾಗಿತ್ತು. ಈ ಬಗ್ಗೆ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ ಎಂದು ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಹೇಳಿದರು.

Advertisement

ಚರ್ಮಗಂಟು ರೋಗ ಹೆಚ್ಚುತ್ತಿದೆ: ರಾಜ್ಯದಲ್ಲಿ ಕಾಲುಬಾಯಿ ಜ್ವರ ನಿಯಂತ್ರಣದಲ್ಲಿದೆ. ಆದರೆ ಚರ್ಮಗಂಟು ರೋಗ ಮತ್ತೆ ಕಾಣಿಸಿಕೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಲಸಿಕಾ ಕಾರ್ಯಕ್ರಮ ಸರಿಯಾಗಿ ನಡೆದಿಲ್ಲ. ಹಾಗಾಗಿ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಚರ್ಮಗಂಟು ರೋಗದ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next