ಹೊಸದಿಲ್ಲಿ: ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ನಿಂದ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಆಗಸ್ಟ್ 25 ರಂದು ಸಿಬಿಐ ಸಲ್ಲಿಸಿದ ಮೇಲ್ಮನವಿಗಳನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಹುಕೋಟಿ ಮೇವು ಹಗರಣಕ್ಕೆ (ದುಮ್ಕಾ, ಚೈಬಾಸಾ, ಡೊರಾಂಡಾ, ದಿಯೋಗರ್ ಖಜಾನೆಗಳು) ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್‌ನ ಆದೇಶವನ್ನು ಸಿಬಿಐ ಪ್ರಶ್ನಿಸಿದೆ. ಆರ್‌ಜೆಡಿ ಅಧ್ಯಕ್ಷರ ಜಾಮೀನು ರದ್ದುಗೊಳಿಸಬೇಕೆಂದು ಸಿಬಿಐ ಬಯಸಿದೆ.
ಈ ವರ್ಷದ ಫೆಬ್ರವರಿಯಲ್ಲಿ ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು.
ಇದನ್ನೂ ಓದಿ:Hit And Run Case: ಬೈಕ್ ಗೆ ಡಿಕ್ಕಿ ಹೊಡೆದು 3 ಕಿಲೋ ಮೀ.ವರೆಗೆ ಎಳೆದೊಯ್ದ ಕಾರು!
ಡೊರಾಂಡಾ ಖಜಾನೆ ಪ್ರಕರಣದ 99 ಆರೋಪಿಗಳ ಪೈಕಿ 24 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, ಕಳೆದ ವಾರವೇ 46 ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿದೆ.
74 ವರ್ಷದ ಲಾಲು ಪ್ರಸಾದ್ ಯಾದವ್ ಅವರಿಗೆ ಈ ಹಿಂದೆ ಜಾರ್ಖಂಡ್ ನ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.