Advertisement
ಚಾರ್ಮಾಡಿ ಘಾಟಿ ಪರಿಸರದ 25 ಕಿ.ಮೀ. ವ್ಯಾಪ್ತಿಯಲ್ಲಿನ ಮಂಜು ಮುಸುಕಿದ ವಾತಾವರಣದ ಹಿನ್ನೆಲೆ ವಾಹನ ಸವಾರರು ಫಾಗ್ ಲ್ಯಾಂಪ್ ಹಾಗೂ ಹೆಡ್‌ಲೈಟ್ ಬಳಸಿ ವಾಹನ ಚಲಾಯಿಸಿದರು. ಬೆಳಗ್ಗಿನಿಂದಲೇ ಭಾರಿ ಮಂಜು ಕವಿದ ವಾತಾವರಣವಿತ್ತು.
Related Articles
ದ. ಕ. ಘಾಟಿ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲದ ನಿರ್ವಹಣೆ ಕಾಮಗಾರಿ ಆರಂಭವಾಗಿದ್ದು ರಸ್ತೆಯ ಇಕ್ಕೆಲಗಳ ಚರಂಡಿಗಳ ಹೂಳೆತ್ತುವ ಕೆಲಸ ನಡೆಯುತ್ತಿದೆ. ಜೆಸಿಬಿ ಮೂಲಕ ಕಾಮಗಾರಿ ನಡೆಯುತ್ತಿದ್ದು ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಘಾಟಿಯ ಕೆಲವು ಭಾಗಗಳಲ್ಲಿ ರಸ್ತೆಯು ಜಾರುತ್ತಿದೆ. ರಸ್ತೆ ಬದಿಯಲ್ಲಿ ಮಣ್ಣು ಕೆಸರು ತುಂಬಿದ್ದು ಆ ಪರಿಸರಗಳಲ್ಲಿ ಕಾಮಗಾರಿ ಇನ್ನಷ್ಟೇ ನಡೆಯಬೇಕಿದೆ.
Advertisement
ಘಾಟಿ ಪರಿಸರದ ಮಳೆಗಾಲದ ನಿರ್ವಹಣೆ ಕಾಮಗಾರಿ ಆರಂಭಿಸಲಾಗಿದೆ ಘಾಟಿಯಲ್ಲಿ ಚರಂಡಿ ದುರಸ್ತಿ ಹಾಗೂ ಇನ್ನಿತರ ಅಗತ್ಯ ಕಾಮಗಾರಿಗಳನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ. ಘಾಟಿಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ-ಚಾರ್ಮಾಡಿ ಮಧ್ಯೆ ರಸ್ತೆ ಅಭಿವೃದ್ಧಿ ಹೊಂದುತ್ತಿದ್ದು, ಮಳೆಗಾಲಕ್ಕೆ ತೊಂದರೆಯಾಗದಂತೆ ಡಾಮರೀಕರಣ ನಡೆಸಲಾಗುತ್ತಿದೆ.-ಶಿವಪ್ರಸಾದ್ ಅಜಿಲ, ಕಾರ್ಯನಿರ್ವಾಹಕ ಅಭಿಯಂತರ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಮಂಗಳೂರು