ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮುತ್ತುನಾಡು ಅಭಿಮಾನಿ ಒಕ್ಕೂಟ ಇವರ ಸಹಯೋಗದಲ್ಲಿ ಕಾಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಡವ ಜಾನಪದ ನಡೆಯಿತು.
ಗಾಳಿಬೀಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಅಯ್ಯಲಪ್ಪಂಡ ಎ.ಪೊನ್ನಪ್ಪ ಮತ್ತು ಕಾರೇರ ಜಮುನಾ ಪಳಂಗಪ್ಪ ಅವರು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿದರು.
ಉಮ್ಮತ್ತಾಟ್, ಕೊಡವ ತಿಂಗ ಪೆದ, ಕೋರ್ ಚೌಕ ಕಟ್ಟುವೊ, ಬಾಳ್ಳೋಪಾಟ್, ತಾಲಿಪಾಟ್, ಪರಿಯಕಳಿ, ಸಮ್ಮಂದ ಅಡ್‌ಕುವೊ, ಪುತ್ತರಿ ಕೋಲಾಟ್, ಬೊಳಕಾಟ್, ಕತ್ತಿಯಾಟ್, ವಾಲಗತ್ತಾಟ್, ಕೊಡವ ಪಾಟ್, ಕೊಡವ ಗಾದೆ ಹೀಗೆ ವಿವಿಧ ಸ್ಪರ್ಧೆಗಳು ನಡೆದವು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು ಕೊಡವ ಜಾನಪದ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಅವರು ಕರೆ ನೀಡಿದರು. ಕೊಡವ ಜಾನಪದ ಕಲೆ ಮತ್ತು ಸಂಸ್ಕೃತಿ ವಿಶಿಷ್ಟವಾಗಿದ್ದು, ಕೊಡವ ಜಾನಪದಕ್ಕೆ ತನ್ನದೇ ಆದ ವೈಶಿಷ್ಟ್ಯ ಇತಿಹಾಸ ಹೊಂದಿದೆ. ಆದ್ದರಿಂದ ಕೊಡವ ಭಾಷೆ, ಸಾಹಿತ್ಯ, ಕಲೆ ಸಂಸ್ಕೃತಿಯನ್ನು ಉಳಿಸಬೇಕು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.
ಮುತ್ತುನಾಡು ಬಗ್ಗೆ ಅಯ್ಯಲಪಂಡ ಎ. ಉತ್ತಪ್ಪ ಅವರು ವಿಚಾರ ಮಂಡಿಸಿದರು. ಸಾಹಿತಿ ನಾಗೇಶ್ ಕಾಲೂರು, ಪೊನ್ನಂಪೇಟೆ ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೋಳೇರ ಝರು ಗಣಪತಿ ಮತ್ತು ಕಾಲೂರು ನಾಡಿನ ಕೊಡವ ಜನಪದ ಅಭಿಮಾನಿ ಚೆನ್ನಪಂಡ ಮಂದಣ್ಣ ಗಾಳಿಬೀಡು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಅಯ್ಯಲಪ್ಪಂಡ ಎ.ಪೊನ್ನಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಗಾಳಿಬೀಡು ಗ್ರಾ.ಪಂ.ಅಧ್ಯಕ್ಷ ಪುದಿಯತಂಡ ಸುಭಾಷ್ ಸೋಮಯ್ಯ, ಅಯ್ಯಲಪಂಡ ಎ.ಉತ್ತಪ್ಪ, ಅಕಾಡೆಮಿ ಸದಸ್ಯರಾದ ಅಪಟ್ಟಿàರ ಟಾಟು ಮೊಣ್ಣಪ್ಪ, ಸುಳ್ಳಿಮಾಡ ಭವಾನಿ ಕಾವೇರಿಯಪ್ಪ, ಕುಡಿಯರ ಶಾರಾದ, ಮನ್ನಕ್ಕಮನೆ ಬಾಲಕೃಷ್ಣ, ಎಚ್.ಎ.ಗಣಪತಿ ಉಪಸ್ಥಿತರಿದ್ದರು.
ಅಕಾಡೆಮಿ ಪ್ರಯತ್ನ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಕೆ.ಪೊನ್ನಪ್ಪ ಅವರು ಮಾತನಾಡಿ ಕೊಡವ ಸಂಸ್ಕೃತಿ, ಕಲೆ, ಜಾನಪದವನ್ನು ಉಳಿಸಿ ಬೆಳೆಸುವಲ್ಲಿ ಅಕಾಡೆಮಿ ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ನಾನಾ ಭಾಗಗಳಲ್ಲಿ ಕೊಡವ ನಮ್ಮೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ಪ್ರಕೃತಿ ವಿಕೋಪಕ್ಕೆ ಸಿಲುಕಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಇದರಿಂದಾಗಿ ಮುತ್ತು ನಾಡು ಭಾಗದಲ್ಲಿ ಕೊಡವ ಜಾನಪದ ನಮ್ಮೆ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಸದ್ಯ ಇಲ್ಲಿನ ಜನರು ಯಥಾ ಸ್ಥಿತಿಗೆ ಮರಳುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೊಡವ ಸಂಸ್ಕೃತಿ, ಜಾನಪದ ಕಲೆಗಳನ್ನು ಉಳಿಸಿ ಕೊಂಡು ಹೋಗು ವಂತಾಗಬೇಕು ಎಂದರು.