Advertisement

ಕಿತ್ತೂರಿನಲ್ಲಿ ಮನಸೂರೆಗೊಂಡ ಜನಪದ ಕಲಾವಾಹಿನಿ

11:57 AM Oct 23, 2021 | Team Udayavani |

ಬೆಳಗಾವಿ: ಚನ್ನಮ್ಮನ‌ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜ್ಯೋತಿ ಸ್ವಾಗತದ ಬಳಿಕ ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.

Advertisement

ನವಿಲು ನೃತ್ಯ, ಕೇರಳ ತೆಯಮ್ ನೃತ್ಯ, ಚೆಂಡೆ ಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಾಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡಗಳ ನೂರಾರು ಕಲಾವಿದರು ಕಲಾವಾಹಿನಿಯಲ್ಲಿ ಪಾಲ್ಗೊಂಡಿದ್ದರು. ಜನಪದ ಗೀತೆಗಳನ್ನು ಹಾಡುತ್ತಾ ಸಾಗಿದ ತಂಡವು ಚನ್ನಮ್ಮನ ಶೌರ್ಯ, ಸಾಹಸದ ಗುಣಗಾನ‌ ಮಾಡುವ ಮೂಲಕ ಕಿತ್ತೂರಿನ ಗತವೈಭವವನ್ನು ಮೆಲುಕು ಹಾಕಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಲಾವಾಹಿನಿಯು ಜನರ ಮನಸೂರೆಗೊಂಡಿತು. ಇದರೊಂದಿಗೆ ವಿವಿಧ ಇಲಾಖೆಯ ಕಾರ್ಯಗಳು ಹಾಗೂ ಯೋಜನೆಗಳ ಅರಿವು ಮೂಡಿಸುವ ಸ್ತಬ್ಧಚಿತ್ರಗಳು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಪೂರ್ಣಕುಂಭ ಹೊತ್ತ ನೂರಾರು ಜನ ಮಹಿಳೆಯರು ಕಲಾವಾಹಿನಿಯ ಮೆರಗು ಹೆಚ್ಚಿಸಿದರು. ರಸ್ತೆಯ ಇಕ್ಕೆಗಲಗಳಲ್ಲಿ ನೆರೆದಿದ್ದ ಸಾವಿರಾರು ಜನರು ವಿವಿಧ ಕಲಾತಂಡಗಳ ಪ್ರದರ್ಶನವನ್ನು ವೀಕ್ಷಿಸಿದರು.

Advertisement

ಇದನ್ನೂ ಓದಿ:ಕಿತ್ತೂರು ಉತ್ಸವ ಬೆಳ್ಳಿ ಹಬ್ಬ ಸಂಭ್ರಮ: ವೀರಜ್ಯೋತಿಗೆ ಸ್ವಾಗತ, ಉತ್ಸವಕ್ಕೆ ಅದ್ಧೂರಿ ಚಾಲನೆ

ಕಿತ್ತೂರು ಮಹಾದ್ವಾರದ ಬಳಿ ಇರುವ ಶೂರ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪ ಅವರ ಪ್ರತಿಮೆಗಳಿಗೂ ಗಣ್ಯರು ಮಾಲಾರ್ಪಣೆ ಮಾಡಲಾಯಿತು.

ಉತ್ಸವ ನಿಮಿತ್ತ ಕಿತ್ತೂರಿನ ಗಡಾದಮರಡಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next