Advertisement
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1935 ಸೆಪ್ಟಂಬರ್ 27 ರಂದು ಜನಿಸಿದ ಅವರು. ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಹೈಸ್ಕೂಲು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಬೆಳೆದಿದ್ದು ಕಥೆ , ಕವನಗಳ ರಚನೆಗೆ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವೊಂದನ್ನೂ ರಚಿಸಿದ್ದರು. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದರು. ಕನ್ನಡ ಸಂಘ, ಯಕ್ಷಗಾನ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗೆಗಾಗಿ ಶ್ರಮಿಸಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದ ಇವರು ತುಳುನಾಡಿನ ಸಂಸ್ಕ್ರತಿ ಮತ್ತು ಕಲೆಯ ಬಗೆಗೆ ವಿಶೇಷ ಒಲವುಳ್ಳವರು.
Related Articles
Advertisement
ಇವರ ತಂದೆ ಮುಂಬೈಯಲ್ಲಿ ಜರ್ಮನ್ ರಾಯಭಾರಿ ಕಚೇರಿಯ ಒಬ್ಬ ಅಧಿಕಾರಿಯ ವಾಹನ ಚಾಲಕರಾಗಿದ್ದರು. ಇವರು ಶಾಲಾ ಶಿಕ್ಷಣ ಪಡೆದಿರದಿದ್ದರೂ, ಕುತೂಹಲ ಮತ್ತು ಸ್ವಪ್ರಯತ್ನದಿಂದ 12 ಭಾಷೆಗಳನ್ನು ಕಲಿತಿದ್ದರು. ಅಮೃತರ ತಾಯಿ ಗೃಹಿಣಿಯಾಗಿದ್ದರೂ, ಮಲೆಯಾಳ ಜನಪದ ಕಥನ ಕಾವ್ಯಗಳನ್ನು ಹಾಡಬಲ್ಲವರಾಗಿದ್ದರು.
ಇದನ್ನೂ ಓದಿ :Putthige ಪರ್ಯಾಯೋತ್ಸವ: ಯಕ್ಷಕಲಾವಿದನಿಂದ ಸಿದ್ಧಗೊಂಡ ಬಿರುದಾವಳಿ ಪರಿಕರ