Advertisement

ಕೋವಿಡ್‌ ನಿಯಮ ಪಾಲನೆಗೆ ಮುಂದಾಗಿ

06:08 PM Apr 05, 2021 | Team Udayavani |

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಏ.1ರಿಂದ 30ರವರೆಗೆ ಮುಂಜಾಗ್ರತಾ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ನಿಯಮಉಲ್ಲಂಘನೆಯಾಗದಂತೆ ನಿಗಾ ವಹಿಸಲು ಪೊಲೀಸ್‌, ಕಂದಾಯಹಾಗೂ ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

Advertisement

ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೋವಿಡ್‌ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಸೋಂಕು ವ್ಯಾಪಕವಾಗದಂತೆನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರಸಹಕಾರ ಬಹಳ ಪ್ರಮುಖವಾಗಿದೆ. ಸಾರ್ವಜನಿಕ ಮೈದಾನ, ಧಾರ್ಮಿಕಪ್ರದೇಶ, ಉದ್ಯಾನವನಗಳು, ಮಾರುಕಟ್ಟೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಗುಂಪುಗೂಡದಂತೆಎಚ್ಚರ ವಹಿಸಬೇಕೆಂದು ಸೂಚನೆ ನೀಡಿದ್ದಾರೆ.

ಯುಗಾದಿ ಹಬ್ಬ ಸೇರಿದಂತೆ ಮುಂಬರುವಯಾವುದೇ ಹಬ್ಬಗಳು, ಉತ್ಸವಗಳನ್ನುಸಾರ್ವಜನಿಕವಾಗಿ ಆಚರಿಸಬಾರದು. ಸಭೆ-ಸಮಾರಂಭಗಳನ್ನು ನಡೆಸದಂತೆಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿಪಾಲಿಸಬೇಕು. ಪ್ರತಿಯೊಬ್ಬರಸಾರ್ವಜನಿಕವಾಗಿ ಅಂತರ ಕಾಯ್ದುಕೊಳ್ಳುವ ಜೊತೆಗೆ ಮಾಸ್ಕ್ಧರಿಸಿ ಓಡಾಡುವುದು ಕಡ್ಡಾಯವಾಗಿದೆಹಾಗೂ ಕಾಲಕಾಲಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಆದೇಶಿಸಲಾಗಿದೆ.

ಕೋವಿಡ್‌-19 ನಿರ್ವಹಣೆಯ ಲಾಕ್‌ಡೌನ್‌ ಕ್ರಮಗಳು, ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರಸೆಕ್ಷನ್‌ 51ರಿಂದ 60ರ ಉಪಬಂಧಗಳು, ಅಲ್ಲದೇ ಭಾರತೀಯ ದಂಡ ಸಂಹಿತೆಸೆಕ್ಷನ್‌ 188ರ ಅಡಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು. ಈ ಕುರಿತು ಪೊಲೀಸ್‌ ಅಧಿಧೀಕ್ಷಕರು ಹಾವೇರಿ, ಉಪ ವಿಭಾಗಾಧಿಕಾರಿಗಳು, ಎಲ್ಲ ತಹಶೀಲ್ದಾರ್‌ರು, ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಎಲ್ಲ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಎಲ್ಲ ಪ್ರಾಧಿಕಾರಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನುಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next