ಬಾಗಲಕೋಟೆ: ಕೋವಿಡ್ 2ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣ ಹೆಚ್ಚಾಗುತ್ತಿದ್ದು, ಕೋವಿಡ್ ನಿಯಮ ಉಲ್ಲಂಘಿಸಿ ರ್ಯಾಲಿ ನಡೆಸಿದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ಹೇಳಿದರು.
ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಏ. 2ರಂದು ಸರಕಾರದಆದೇಶದನ್ವಯ ಜಿಲ್ಲೆಯಲ್ಲಿ ಜಾತ್ರೆ, ರ್ಯಾಲಿ,ಪ್ರತಿಭಟನೆ ಹಮ್ಮಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದೇಶ ಪಾಲನೆ ಮಾಡದೇ ರ್ಯಾಲಿ ಕೈಗೊಂಡವರ ವಿರುದ್ದ ಈಗಾಗಲೇ 2
ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಮುಂದಾಗಿದೆ ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್, ದೈಹಿಕಅಂತರ ಪಾಲನೆ ಕಡ್ಡಾಯವಾಗಿದ್ದು, ಮಾಸ್ಕ್ಧರಿಸದಿದ್ದಲ್ಲಿ ನಗರ ಪ್ರದೇಶದಲ್ಲಿ 250 ರೂ.,ಗ್ರಾಮೀಣ ಪ್ರದೇಶದಲ್ಲಿ 100 ರೂ.ಗಳ ದಂಡವಿಧಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 63621 ಜನರಿಗೆ ದಂಡ ವಿಧಿಸಿ 56,85,039 ರೂ.ಗಳನ್ನುಸಂಗ್ರಹಿಸಲಾಗಿದೆ. ಏಪ್ರಿಲ್ 1ರಿಂದ 8ರವರೆಗೆ 3585 ಜನರಿಗೆ ದಂಡ ವಿಧಿಸಿ, 3,58,500 ರೂ. ಸಂಗ್ರಹಿಸಲಾಗಿದೆ. ಕೋವಿಡ್ ಮಾದರಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗುತ್ತಿದ್ದು, ಪ್ರತಿದಿನ 3600 ಗುರಿನಿಗದಿಪಡಿಸಲಾಗಿದೆ. ಶೇ. 85ರಷ್ಟು ಪ್ರತಿದಿನ ಗುರಿ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.
ಶ್ರೀಶೈಲಕ್ಕೆ ಹೋಗಿ ಬಂದವರೆಲ್ಲರ ಸ್ಯಾಂಪಲ್ ಕಲೆಕ್ಟ್ ಮಾಡಲಾಗುತ್ತಿದೆ. ಜಿಲ್ಲೆಯಿಂದ ಕೋವಿಡ್‌ಮಾದರಿ ನೀಡಿ ಶ್ರೀಶೈಲಕ್ಕೆ ಹೋದವರಲ್ಲಿ 7 ಜನರಿಗೆ ಕೋವಿಡ್ ದೃಢಪಟ್ಟಿದೆ. ಶ್ರೀಶೈಲಕ್ಕೆ ಭಕ್ತರುಬರುವದನ್ನು ನಿರ್ಭಂದಿಸುವ ಕುರಿತು ಮನವಿಮಾಡಿಕೊಳ್ಳಲಾಗುತ್ತಿದೆ. ಹೊರ ರಾಜ್ಯಕ್ಕೆ ಹೋಗಿಬಂದವರ ಕೋವಿಡ್ ಮಾದರಿ ಪರೀಕ್ಷಿಸಲಾಗುತ್ತಿದೆ.ಏಪ್ರಿಲ್ 1ರಿಂದ ಇಲ್ಲಿಯವರೆಗೆ 60 ಜನರಿಗೆಕೋವಿಡ್ ದೃಢಪಟ್ಟಿರುವುದನ್ನು ಕಂಡು ಜಿಲ್ಲೆಯಲ್ಲಿಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲುಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಕೋವಿಡ್ ಲಸಿಕೆಯನ್ನು ಪ್ರತಿದಿನ 10 ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ.
ಜಿಲ್ಲೆಯಲ್ಲಿ ವ್ಯಾಕ್ಸಿನ್‌ಗಳ ಕೊರತೆ ಇರುವುದಿಲ್ಲ.ಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿಆಕ್ಸಿಜನ್ ಹೊಂದಿದ ಹಾಸಿಗೆ ಸಿದ್ಧಪಡಿಸಲಾಗಿದೆ.ಒಟ್ಟು 350 ಹಾಸಿಗೆಗಳು ಇದ್ದು ಅದರಲ್ಲಿ 75ಕೋವಿಡ್ ರೋಗಿಗಳಿಗೆ ಮೀಸಲಿರಿಸಲಾಗಿದೆ.ಪ್ರಕರಣ ಹೆಚ್ಚಾದಲ್ಲಿ ಕೋವಿಡ್ ಆಸ್ಪತ್ರೆಯಾಗಿಪರಿವರ್ತಿಸಲಾಗುವುದು. ಅಗತ್ಯ ಬಿದ್ದಲ್ಲಿ ಸಿಸಿಸಿಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶಜಗಲಾಸರ, ಜಿಪಂ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಟಿ. ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಡಾ| ಬಿ.ಡಿ.ಪಟ್ಟಣಶೆಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿಡಾ| ವಿಜಯ ಕಂಠಿ ಮುಂತಾದವರು ಉಪಸ್ಥಿತರಿದ್ದರು.