Advertisement
ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕುವಿನ ಪ್ರಕರಣಗಳು ಹೆಚ್ಚಾಗುತ್ತಿವೆ, ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊಸ ಹೊಸ ಮಾರ್ಗಸೂಚಿಗಳನ್ನು ಆಗಿಂದಾಗೆ ಹೊರಡಿಸುತ್ತಿದ್ದು. ಜಿಲ್ಲೆಯ ಸಾರ್ವಜನಿಕರು ಅವುಗಳನ್ನು ಪಾಲಿಸುವುದರೊಂದಿಗೆ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಪ್ರತಿಯೊಬ್ಬರು ಚಾಚು ತಪ್ಪದೆ ಪಾಲಿಸಬೇಕು ತಪ್ಪಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ದಂಡ ವಿಧಿಸಬೇಕು ಎಂದರು.
Related Articles
Advertisement
ಇದನ್ನೂ ಓದಿ :ಹಲವು ಪ್ರತಿಭೆಗಳ ಸಂಗಮ ಕಿರಣ ಕುಮಾರ : ಮಲೇಷ್ಯಾದಲ್ಲಿ ಬೆಳಗಿದ ಯುವ ಪ್ರತಿಭೆ
ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ. ದೂರ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಬಹುದು.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ .ಕಾರ್ಮಿಕರು ಹಾಗೂ ನೌಕರರು ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.
ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದಲ್ಲಿ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಅಧಿಕೃತ ಟಿಕೇಟ್ ಗಳನ್ನು ತೋರಿಸಿ ಸಂಚರಿಸಬಹುದು .
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪಿಡಿಓಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸೋಂಕಿತ ವ್ಯಕ್ತಿಗಳು ಹೋಂ ಐಸೋಲೇಶನ್ ನಲ್ಲಿ ಇರುವಾಗ ಅವರ ಮೇಲೆ ನಿಗಾ ವಹಿಸಬೇಕು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಕೋವಿಡ್ ರೋಗನಿರೋಧಕ ಲಸಿಕೆಯನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು.
ಇದನ್ನೂ ಓದಿ :ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲ್ಲ, ಶೀಘ್ರವೇ ಕಠಿಣ ನಿರ್ಬಂಧ ಜಾರಿ: ಕೇಜ್ರಿವಾಲ್
ಕೋವಿಡ್ ಸಂಬಂಧಿತ ಜನ ಜಾಗೃತಿ ಕಾರ್ಯಕ್ರಮಗಳು ಹಾಗೂ ಬೀದಿನಾಟಕಗಳನ್ನು ಮಾಡುವುದರ ಮೂಲಕ ಜನರಿಗೆ ಅರಿವು ಮೂಡಿಸಬೇಕು.
ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪೂರಕ ಔಷಧಿ ಸೇರಿದಂತೆ ಮತ್ತಿತರ ಉಪಕರಣಗಳನ್ನು ಕೊರತೆಯಾಗದಂತೆ ದಾಸ್ತಾನು ಇಟ್ಟುಕೊಳ್ಳಬೇಕು.
ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಇಬ್ಬರು ಹೋಂ ಗಾರ್ಡ್ ಗಳನ್ನು ನಿಯೋಜಿಸಿ, ಬೇರೆ ರಾಜ್ಯ, ಜಿಲ್ಲೆಗಳಿಂದ ಈ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ವರದಿ ತರುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.