ಬೀದರ: ಮಹಾತ್ಮ ಗಾಂಧಿಧೀಜಿಯವರ ಜೀವನ ಸಂದೇಶಗಳನ್ನು ಭಾಷಣಕ್ಕೆ ಮಾತ್ರ ಸೀಮಿತಗೊಳಿಸದೇ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಸ್. ಪಾಟೀಲ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧಿಧೀಜಿಯವರು ಅಹಿಂಸೆ, ಸತ್ಯಾಗ್ರಹ, ಅಸಹಕಾರದ ಮೂಲಕ ಬ್ರಿಟೀಷರಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಜೀವನದ ಕೊನೆಯ ವರೆಗೆ ಸಚ್ಚಾರಿತ್ರ್ಯ ಮತ್ತು ನೈತಿಕ ಮೌಲ್ಯಗಳಿಗೆ ಬದ್ಧರಾಗಿದ್ದರು. ಆದ್ದರಿಂದಲೇ ಅವರನ್ನು ಮಹಾತ್ಮ ಎಂದು ಗೌರವಿಸಲಾಗುತ್ತದೆ ಎಂದು ಹೇಳಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ನಂಜುಂಡಯ್ನಾ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ನಿರ್ಮಲಾದೇವಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಜೀವನರಾವ್ ಕುಲಕರ್ಣಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧಿಧೀಶ ಯಮುನಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ರಾಘವೇಂದ್ರ, ಸಿವಿಲ್ ನ್ಯಾಯಾಧಿಧೀಶ ಉಜ್ವಲಾ ವೀರಣ್ಣಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ರೇಯಾಂಶ್ ದೊಡ್ಡಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ಪಾಟೀಲ ಹಾಗೂ ವಕೀಲರು, ಸಿಬ್ಬಂದಿ, ಕಕ್ಷಿದಾರರು ಇದ್ದರು. ಈ ವೇಳೆ ದೇಶಕ್ಕಾಗಿ ಹುತಾತ್ಮರಾದ ಮಹನೀಯರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಬಳಿಕ ಕಲಾವಿದ ನರಸಿಂಗ್ ಅವರ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು.