Advertisement

ಮಾರ್ಗಸೂಚಿ ಪಾಲಿಸಿ ದೀಪಾವಳಿ ಆಚರಿಸಿ

06:57 PM Nov 14, 2020 | Suhan S |

ಯಾದಗಿರಿ: ಬೆಳಕಿನ ಹಬ್ಬ ದೀಪಾವಳಿಯನ್ನು ಈ ಬಾರಿ ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲಿಸಿ ಸರಳ ಹಾಗೂ ಭಕ್ತಿಯಿಂದ ಆಚರಿಸುವಂತೆ ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ ಆರ್‌. ಜನರಿಗೆ ಸಲಹೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸರಳ ಆಚರಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಬಾರಿ ದೀಪಾವಳಿ ವಿಜೃಂಭಣೆಯಿಂದ ಆಚರಿಸಲಾಗುತಿತ್ತು. ಈ ಬಾರಿ ಕೋವಿಡ್‌ ಸೋಂಕಿನಿಂದಾಗಿ ಹಬ್ಬ ಆಚರಿಸಲು ಸರ್ಕಾರ ಕೆಲ ಮಾರ್ಗಸೂಚಿ ಹೊರಡಿಸಿದೆ. ಅದರಲ್ಲಿ ಪರಿಸರಕ್ಕೆ ಪೂರಕವಾದ ಹಸಿರು ಪಟಾಕಿಗಳನ್ನೇ ಬಳಸಲು ಕೋರಲಾಗಿದೆ. ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು, ಸಿಎಸ್‌ಐಆರ್‌ ಚಿಹ್ನೆಯುಳ್ಳ ಹಸಿರು ಪಟಾಕಿಬಳಸಬೇಕು. ಅದನ್ನು ಹೊರತುಪಡಿಸಿ ಬೇರೆ ಪಟಾಕಿ ಉಪಯೋಗಿಸಬಾರದು. ಈ ದಿಸೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಹೇಳಿದರು.

ಆರೋಗ್ಯ ಇಲಾಖೆ ಮಾನದಂಡಗಳ ಪ್ರಕಾರ 10 ವರ್ಷದೊಳಗಿನ ಮಕ್ಕಳು ಹಾಗೂ 65 ವರ್ಷ ಮೀರಿದ ವ್ಯಕ್ತಿಗಳು, ಗರ್ಭಿಣಿಯರು, ಬಾಣಂತಿಯರು ಮತ್ತು ಜ್ವರ, ಕೆಮ್ಮು ಸೇರಿ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಪಟಾಕಿ ಸಿಡಿಸುವಸಂದರ್ಭದಲ್ಲಿ ಭಾಗವಹಿಸಬಾರದು. ಕೋವಿಡ್‌ ಹಿನ್ನೆಲೆಯಲ್ಲಿ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಸಬೇಕು. ಮಾಸ್ಕ್ ಧರಿಸದವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next