Advertisement

ರಾಜ್ಯೋತ್ಸವ ಆಚರಣೆಯಲ್ಲಿ ನಿಯಮ ಪಾಲಿಸಿ

08:11 PM Oct 23, 2020 | Suhan S |

ಮೊಳಕಾಲ್ಮೂರು: ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರದ ನಿಯಾಮಾನುಸಾರ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ತಹಶೀಲ್ದಾರ್‌ ಮಲ್ಲಿಕಾರ್ಜುನ ಹೇಳಿದರು.

Advertisement

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊರೊನಾ ಹರಡದಂತೆ ಜಾಗ್ರತೆ ವಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್‌ ಬಳಸಬೇಕು.ಧ್ವಜಾರೋಹಣವನ್ನು ನೆರವೇರಿಸಿ ಸಾಂಕೇತಿಕವಾಗಿ ಮತ್ತು ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದರು.

ರಾಷ್ಟ್ರೀಯ ಹಬ್ಬಗಳು ಹಾಗೂ ಇನ್ನಿತರ ಸಭೆ, ಸಮಾರಂಭಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗಿರುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರಿಗೆ ನೋಟಿಸ್‌ ಜಾರಿ ಮಾಡಲಾಗುವುದು. ನಾಡು, ನುಡಿ, ಕಲೆ , ಸಾಹಿತ್ಯದಲ್ಲಿ ಸಾಧನೆ ಮಾಡಿದವರ ಸನ್ಮಾನವನ್ನು ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಈ ಬಾರಿಯ ರಾಜ್ಯೋತ್ಸವದಲ್ಲಿ ಕೈಬಿಡಲಾಗಿದೆ ಎಂದು ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಡಿ.ಒ. ಮುರಾರ್ಜಿ ಮಾತನಾಡಿ, ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ , ರಂಗಭೂಮಿ ಇನ್ನಿತರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿತ್ತು. ಈ ಸಲ ಬಹಿರಂಗ ಸಮಾರಂಭ ಮಾಡಿದೆ ಸನ್ಮಾನ ಕಾರ್ಯಕ್ರಮ ಮಾಡಬಹುದು. ಬಹುಭಾಷಾ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಗೀತೆಗಳನ್ನು ಹಾಡಿ ಅವರಿಗೆ ನುಡಿ-ನಮನ ಸಲ್ಲಿಸುವಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ಕರವೇ ತಾಲೂಕು ಅಧ್ಯಕ್ಷ ಸೂರಮ್ಮನಹಳ್ಳಿ ನಾಗರಾಜ್‌ ಮಾತನಾಡಿ, ಕನ್ನಡ ರಾಜ್ಯೋತ್ಸವ ಸೇರಿದಂತೆ ಇನ್ನಿತರ ರಾಷ್ಟ್ರೀಯ ಹಬ್ಬಗಳು ಮತ್ತು ಇನ್ನಿತರ ಮಹಾನ್‌ ರಾಷ್ಟ್ರ ನಾಯಕರ ಜಯಂತಿಯ ಪೂರ್ವಭಾವಿ ಹಾಗೂ ಸಮಾರಂಭಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗುತ್ತಿದ್ದಾರೆ. ಅಧೀನ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಬದಲು ಕಡ್ಡಾಯವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಲು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರಲ್ಲಿ ಕೋರಿದರು.

Advertisement

ಬಿಜೆಪಿ ಜಿಲ್ಲಾ ಯುವ ಮೋರ್ಚಾದಬಿ. ವಿಜಯ್‌, ಭಾರತ ಕಮ್ಯೂನಿಸ್ಟ್‌ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಜಾಫರ್‌ಷರೀಫ್‌ ಮಾತನಾಡಿದರು. ತಾಲೂಕುಕಸಾಪ ಪ್ರಧಾನ ಕಾರ್ಯದರ್ಶಿ ಕೆ.ಒ. ಶಿವಣ್ಣ, ವಾಲ್ಮೀಕಿ ನಾಯಕ ಸಮಿತಿಯ ಭೀಮಣ್ಣ, ಬೋರನಾಯಕ, ಟೈಲರ್‌ ತಿಪ್ಪೇಸ್ವಾಮಿ, ತಾಲೂಕು ಕಚೇರಿಯ ಶಿರಸ್ತೇದಾರ ಏಳುಕೋಟಿ, ಶಿಶು ಅಭಿವೃದ್ಧಿ ಯೋಜನಾಕಾರಿ ಎಸ್‌. ಸವಿತಾ, ತಾಲೂಕು ಆರೋಗ್ಯಾಧಿಕಾರಿ ಡಾ| ಸುಧಾ, ತೋಟಗಾರಿಕೆ ಇಲಾಖೆಯ ಲೋಕೇಶ್‌, ಶಿಕ್ಷಕ ಓಬಣ್ಣ, ತಾಲೂಕು ಸಮಾಜಕಲ್ಯಾಣ ಇಲಾಖೆಯ ಹಾಲೇಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next