Advertisement

ಬಾಬೂಜಿ ತತ್ವಾದರ್ಶಗಳ ಪಾಲನೆಯಾಗಲಿ: ಸಿಎಂ

10:42 AM Apr 06, 2020 | Suhan S |

ಬೆಂಗಳೂರು: ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ದಿ. ಡಾ. ಬಾಬು ಜಗಜೀವನ ರಾಮ್‌ ಅವರ ತತ್ವಾದರ್ಶವನ್ನು ಯುವಜನರು ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಡಾ. ಬಾಬು ಜಗಜೀವನ ರಾಮ್‌ 113ನೇ ಜನ್ಮ ದಿನಾಚರಣೆ ಅಂಗ ವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿದ ನಂತರ ಸುದ್ದಿಗಾರೊಂದಿಗೆ ಮಾತ ನಾಡಿದ ಅವರು, ಸ್ವಾತಂತ್ರ್ಯನಂತರ ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗಿದ್ದಾಗ ಕೇಂದ್ರ ಕೃಷಿ ಸಚಿವರಾಗಿದ್ದ ಬಾಬೂಜಿ ಸುಧಾರಿತ ಬಿತ್ತನೆ ಬೀಜದ ತಳಿಗಳ ಆವಿಷ್ಕಾ ರಕ್ಕೆ ಆದ್ಯತೆ ನೀಡುವ ಮೂಲಕ ಹಸಿರು ಕ್ರಾಂತಿಯ ಹರಿಕಾರೆನ್ನಿಸಿದ್ದಾರೆ ಎಂದರು.

ಅವರು ರಕ್ಷಣಾ ಸಚಿವರಾಗಿ ಮಾಡಿದ ಸಾಧನೆ ಅಪಾರ ಎಂದರು. ಬಾಬೂಜಿ ಅವರು ಶೋಷಿತರ ದನಿಯಾಗಿ ಹೋರಾಟ ನಡೆಸಿದ್ದರು ಎಂದು ಬಣ್ಣಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ಸಂಸದ ನಾರಾಯಣ ಸ್ವಾಮಿ, ಮಾಜಿ ಸಚಿವ ಎಚ್‌. ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ  ಭಾಸ್ಕರ್‌, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್‌, ಸಲಹೆಗಾರರಾದ ಇ. ವೆಂಕಟಯ್ಯ, ಆಯುಕ್ತ ಪೆದ್ದಪ್ಪಯ್ಯ, ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್‌ ಕುಮಾರ್‌, ಬಾಬು ಜಗಜೀವನರಾಮ್‌ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್‌. ನಟರಾಜ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಸಂಗಪ್ಪ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಮಗದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next