Advertisement

ಪ್ಲಾಸ್ಟಿಕ್‌ ನಿಷೇಧ ಕಾಯ್ದೆ ಪಾಲಿಸಿ

06:00 PM Jul 06, 2022 | Team Udayavani |

ಹುಣಸಗಿ: ಏಕ ಬಳಕೆಯ ಪ್ಲಾಸ್ಟಿಕ್‌ ವಸ್ತುಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆಯ ಅನುಪಾಲನೆ ನಿಯಮಗಳು 2021ರ ಕುರಿತು ಪಟ್ಟಣದಲ್ಲಿ ಮಂಗಳವಾರ ಪಪಂ ವತಿಯಿಂದ ಜಾಥಾ ನಡೆಸಲಾಯಿತು.

Advertisement

ಪಪಂ ಆಡಳಿತಾಧಿಕಾರಿ ತಹಶೀಲ್ದಾರ್‌ ಜಗದೀಶ ಚೌರಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಬ್ಯಾನರ್‌, ಬಂಟಿಂಗ್ಸ್‌, ಫ್ಲೆಕ್ಸ್‌ ಹಾಗೂ ಪ್ಲೇಟ್‌ಗಳು, ಧ್ವಜಗಳು ಸೇರಿದಂತೆ ಇನ್ನಿತರ ಪ್ಲಾಸ್ಟಿಕ್‌ ವಸ್ತುಗಳ, ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣೆ ಮತ್ತು ಮಾರಾಟವನ್ನು ಜು. 1ರಿಂದಲೇ ಜಾರಿಗೆ ಬರುವಂತೆ ಸರಕಾರದಿಂದ ನಿಷೇಧಿಸಲಾಗಿದೆ. ಸರಕಾರದ ಆದೇಶವನ್ನು ಉಲ್ಲಂಘಿಸಿದರೆ ಕಾಯ್ದೆಯಂತೆ ಕಟ್ಟುನಿಟ್ಟಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಪ್ರಕಾಶ ಬಾಗ್ಲಿ, ಆರೋಗ್ಯ ನಿರೀಕ್ಷಕ ಶಿವುಕುಮಾರ್‌ ಹಾಗೂ ಪೌರ ಕಾರ್ಮಿಕರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next