Advertisement

ಮುಂಜಾಗ್ರತಾ ಕ್ರಮ ಅನುಸರಿಸಿ

05:24 AM Jul 06, 2020 | Team Udayavani |

ಮದ್ದೂರು: ತಾಲೂಕು ಸೇರಿದಂತೆ ಪಟ್ಟಣದ ವಿವಿಧೆಡೆ ಕೋವಿಡ್‌-19 ಕಂಡು ಬಂದಿದೆ. ಸಾರ್ವಜನಿಕರು ಸರ್ಕಾರದ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ, ಇಲಾಖೆ ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು ಎಂದು ಶಾಸಕ  ಡಿ.ಸಿ.ತಮ್ಮಣ್ಣ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೋವಿಡ್‌-19 ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

Advertisement

ತಾಲೂಕಿನಲ್ಲಿ 25ಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದು, 136  ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಇದ್ದು, ಕೋವಿಡ್‌ 19 ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಹೇಳಿದರು.ಕ್ವಾರಂಟೈನ್‌ ನಲ್ಲಿರುವ ಸ್ಥಳೀಯರಿಗೆ ಮೂಲ ಸೌಲಭ್ಯ ಕಲ್ಪಿಸಲು ಅಗತ್ಯ  ಕ್ರಮವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ಕೋವಿಡ್‌ -19 ತಡೆಗೆ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಬೇಕು.

ಲಾಕ್‌ಡೌನ್‌ ಸಡಿಲಗೊಂಡ ದಿನದಿಂದಲೂ ಹೊರ ರಾಜ್ಯ, ಜಿಲ್ಲೆಗಳಿಂದ ಆಗಮಿಸುವವರ ಸಂಖ್ಯೆ ಅಧಿಕವಾಗಿದೆ. ಇದರಿಂದ  ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಸೋಂಕಿತರ ಸಂಪರ್ಕ ಪತ್ತೆಗೆ ಕ್ರಮವಹಿಸಲಾಗಿದ್ದು, ಗಂಟಲು ದ್ರವ ಪರೀಕ್ಷೆಗೆಂದು ಆಗಮಿಸುವ ಸಾರ್ವಜನಿಕರಿಗೆ ವಿಳಂಬ ಮಾಡದೇ ಶೀಘ್ರದಲ್ಲಿ  ಪರೀಕ್ಷೆ ನಡೆಸಲು ಆರೋಗ್ಯಾಧಿಕಾರಿಗಳು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ತಹಶೀಲ್ದಾರ್‌ ಎನ್‌.ವಿ. ವಿಜಯಕುಮಾರ್‌, ತಾಪಂ ಇಒ ಮುನಿರಾಜು, ಪುರಸಭೆ ಮುಖ್ಯಾಧಿಕಾರಿ ಮುರುಗೇಶ್‌, ಸಿಪಿಐ ಕೆ.ಆರ್‌. ಪ್ರಸಾದ್‌, ಪಿಎಸ್‌ಐಗಳಾದ  ಮೋಹನ್‌.ಡಿ. ಪಟೇಲ್‌, ಮಂಜೇಗೌಡ, ಅಧಿಕಾರಿಗಳಾದ ಕಾವ್ಯಶ್ರೀ, ಮಂಜುನಾಥ್‌ನಾಯಕ್‌, ನಾಗೇಂದ್ರ ಗಾವ್ಕರ್‌, ಶಿಂಷಾ ಬ್ಯಾಂಕ್‌ ಅಧ್ಯಕ್ಷ ತಗ್ಗಹಳ್ಳಿ ಚಂದ್ರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next