Advertisement

ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ

05:37 PM Apr 25, 2020 | Suhan S |

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್‌-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಜನತೆ ಹಾಗೂ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್‌. ಅವರು ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್‌-19 ಸ್ಥಿತಿಗತಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೋವಿಡ್‌-19 ಪ್ರಕರಣಗಳು ದಾಖಲಾಗದಂತೆ ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಕೋವಿಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ ಎಂದರು.

ಈಗಾಗಲೇ ಕೇಂದ್ರ ಸರ್ಕಾರವು ಕೃಷಿ ಚಟುವಟಿಕೆ, ಅಗತ್ಯ ವಸ್ತುಗಳು ಮತ್ತು ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸುವುದರ ಜೊತೆಗೆ ಇತರ ನಿಯಮಗಳನ್ನು ಸಡಿಲಗೊಳಿಸಿದೆ. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಜನರಿಗೆ ಯಾವುದೇ ದಿನಸಿ ಅಗತ್ಯ ವಸ್ತುಗಳಾದ ತರಕಾರಿ, ಅಕ್ಕಿ, ಬೆಳೆ ಸೇರಿದಂತೆ ಇತರೆ ವಸ್ತುಗಳನ್ನು ಕೊಂಡುಕೊಳ್ಳಲು ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಮತ್ತು ಸಲಹೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಮಾತನಾಡಿ, ಕೋವಿಡ್‌-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಎಲ್‌ ಒಗಳನ್ನು ಬಳಸಿಕೊಂಡು ಈಗಾಗಲೇ ಶೇ. 50ರಷ್ಟು ಸರ್ವೇ ಮಾಡಲಾಗಿದೆ. ಪ್ರತಿ ಎರಡು ದಿನಗಳಿಗೊಮ್ಮೆ ಇವರು ಮನೆ-ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲಾ ಆಸ್ಪತ್ರೆಯನ್ನು ಕೋವಿv-19 ವಿಶೇಷ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಮಾಡಿದ್ದು, ಇದರ ನೆಲ ಮಹಡಿಯಲ್ಲಿ 50 ಬೆಡ್‌ಗಳನ್ನೊಳಗೊಂಡ ಐಸಿಯು ಕೇಂದ್ರ ಸ್ಥಾಪಿಸಲಾಗಿದೆ. ಅಲ್ಲದೇ ಗಂಗಾವತಿಯಲ್ಲೂ 30 ಬೆಡ್‌ಗಳ ಐಸಿಯು ಕೇಂದ್ರ ಪ್ರಾರಂಭಿಸಲಾಗಿದೆ. ಕಿಮ್ಸ್‌ನಲ್ಲಿ ಲ್ಯಾಬ್‌ಗಾಗಿ ಈಗಾಗಲೇ ವರ್ಕ್‌ ಆಡರ್‌ ನೀಡಲಾಗಿದೆ ಎಂದರು.

ಜಿಲ್ಲೆಯ ಜನರು ದಕ್ಷಿಣ ಕನ್ನಡ, ಉಡುಪಿ, ಧಾರವಾಡ ಮತ್ತು ಬೆಂಗಳೂರುಗಳಲ್ಲಿ ಸಿಲಿಕಿಕೊಂಡಿದ್ದು, ಅವರನ್ನು ಕರೆತರಲು ಸಂಬಂಧಿಸಿದ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲಿದ್ದು, ಅವರಿಗೆ ವಾಹನದ ವ್ಯವಸ್ಥೆ ಮಾಡಲು ಕೋರಲಾಗಿದೆ. ಇದರ ಜವಾಬ್ದಾರಿಯನ್ನು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಿದ್ದು, ಬೇರೆ ಜಿಲ್ಲೆಯಲ್ಲಿ ಸಿಲುಕಿಕೊಂಡ ಜನರು ನಮ್ಮ ಜಿಲ್ಲೆಗೆ ಬಂದ ತಕ್ಷಣ ಅವರಿಗೆ ಪ್ರತ್ಯೇಕ ಕ್ವಾರೆಂಟೈನ್‌ನಲ್ಲಿ ಇಡಲಾಗುವುದು. ಪ್ರತಿ ಗ್ರಾಪಂಗಳಿಗೆ ಎರಡು ಥರ್ಮಲ್‌ ಸ್ಕ್ಯಾನರ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Advertisement

ಜಿಪಂ ಸಿಇಒ ರಘುನಂದನ್‌ ಮೂರ್ತಿ, ಎಸ್‌ಪಿ ಜಿ. ಸಂಗೀತಾ, ಎಡಿಸಿ ಎಂ.ಪಿ. ಮಾರುತಿ, ಡಿಎಚ್‌ಒ ಡಾ| ಲಿಂಗರಾಜು, ಆಹಾರ ಇಲಾಖೆ ಉಪನಿರ್ದೇಶಕ ನಾರಾಯಣರೆಡ್ಡಿ, ತಹಶೀಲ್ದಾರ್‌ ಜೆ.ಬಿ. ಮಜ್ಜಗಿ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next