Advertisement

ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿ ಪಾಲಿಸಿ: ಪೊಲೀಸರಿಗೆ ಗೃಹ ಸಚಿವರ ತಾಕೀತು

04:17 PM Sep 03, 2021 | Team Udayavani |

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಆಯುಕ್ಗ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

Advertisement

ಯಾವುದೇ ವಾಹವನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂಧರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ:ಸರ್ಕಾರ ರಚನೆಗೂ ಮುನ್ನಾ ವಿದೇಶಗಳೊಂದಿಗೆ ಬೆಂಬಲ ಯಾಚಿಸಿದ ತಾಲಿಬಾನ್!ಚೀನಾದೊಂದಿಗೂ ಒಪ್ಪಂದ.?

ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ.

ಟೋಯಿಂಗ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿ ಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next