Advertisement

ಮಾರ್ಗಸೂಚಿ ಪಾಲಿಸಿ: ಡಿಸಿ

03:54 PM Aug 22, 2020 | Suhan S |

ಕೊಪ್ಪಳ: ಕೋವಿಡ್‌-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗಣೇಶ ಉತ್ಸವವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಆಚರಿಸಬೇಕೆಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Advertisement

ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಕೋವಿಡ್‌ ವೈರಸ್‌ ಹರಡುವಿಕೆ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್‌-19 ರ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡುವಂತಿಲ್ಲ. ಗಣೇಶ ಚತುರ್ಥಿ ಹಬ್ಬದ ಸಂಬಂಧ ಯಾವುದೇ ಡಿಜೆ ಸೌಂಡ್‌ ಸಿಸ್ಟಂ ಬಳಸಲು ಅನುಮತಿಯಿಲ್ಲ. ಈ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಸಮೀಪದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌, ಕೃತಕ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀಗಣೇಶ ಮೂರ್ತಿ ವಿಸರ್ಜನೆ ಮಾಡಬಾರದು. ಈ ಆದೇಶಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಗಣೇಶೋತ್ಸವ ಸಮಿತಿಗಳ ನಿರಾಸಕ್ತಿ :  ಕೋವಿಡ್‌ ವೈರಸ್‌ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೂ ಸರಕಾರ ಕಡಿವಾಣ ಹಾಕಿದ್ದರಿಂದ ಹಬ್ಬದ ಸಡಗರ ಕಾಣುತ್ತಿಲ್ಲ. ಪ್ರತಿವರ್ಷ ಪಟ್ಟಣದಲ್ಲಿ ಮಹಾರಾಷ್ಟ್ರದ ವಿವಿಧೆಡೆಯಿಂದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬರುತ್ತಿದ್ದವು. ಆದರೆ ಸರಕಾರದ ಕೆಲ ನಿರ್ಬಂಧ ವಿಧಿ  ಸಿದ್ದರಿಂದ ಈ ಬಾರಿ ದೊಡ್ಡ ಮೂರ್ತಿಗಳು ಮಾರಾಟಕ್ಕೆ ಲಭ್ಯವಿಲ್ಲ. ಇದರಿಂದ ಗಣೇಶೋತ್ಸವ ಸಮಿತಿಗಳಲ್ಲಿಸಂಭ್ರಮ ಎಂದಿನಂತಿಲ್ಲ. ಒಂದೇ ದಿನ ಗಣೇಶನನ್ನು ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವುದು ಸಂಘಟನೆಗಳಿಗೆ ಇಷ್ಟವಿಲ್ಲದ ಕಾರಣ ಈ ಬಾರಿ ಗಣೇಶೋತ್ಸವ ಆಚರಣೆ ಯುವಕರಲ್ಲಿ ನಿರಾಸೆ ಮೂಡಿಸಿದೆ.

ಇನ್ನು ಮಾರುಕಟ್ಟೆಗಳಲ್ಲಿ ಈ ಬಾರಿ ಸಣ್ಣಪುಟ್ಟ ಗಣೇಶ ಮೂರ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಇಟ್ಟಿದ್ದು, ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡುವವರು ಗಣೇಶನ ಖರೀದಿ ಮಾಡಿದರು. ಹವಾಮಾನ ವೈಪರಿತ್ಯದಿಂದ ತುಂತುರು ಮಳೆಯಿಂದ ಮಾರುಕಟ್ಟೆಯಲ್ಲೂ ಹೂವು, ಹಣ್ಣುಗಳ ಬೆಲೆ ಕೂಡ ಗಗನಕ್ಕೇರಿದ್ದು, ಹಬ್ಬದಾಚರಣೆ ದುಬಾರಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next