ಇಸ್ಲಾಮಾಬಾದ್: ತೈಲ ಟ್ಯಾಂಕರ್ ಮತ್ತು ಬಸ್ ನಡುವಿನ ಭೀಕರ ಅಪಘಾತದಲ್ಲಿ ಸುಮಾರು 20 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ (ಆಗಸ್ಟ್ 16) ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅತ್ತೆ, ಸೊಸೆ ಶವ ಪತ್ತೆ : ದರೋಡೆಕೋರರ ಕೈವಾಡ ಶಂಕೆ ?
ಲಾಹೋರ್ ನಿಂದ ಸುಮಾರು 350 ಕಿಲೋ ಮೀಟರ್ ದೂರದಲ್ಲಿರುವ ಮುಲ್ತಾನ್ ಮಾರ್ಗದಲ್ಲಿ ಈ ಭೀಕರ ಅಪಘಾತ ನಡದಿದೆ. ಅತೀಯಾದ ವೇಗ ಈ ಘಟನೆಗೆ ಕಾರಣ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ನಂತರ ಹಲವು ಗಂಟೆಗಳ ಕಾಲ ಮುಲ್ತಾನ್ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಸುಮಾರು 20 ಮಂದಿ ಸಜೀವವಾಗಿ ದಹನವಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಆರು ಪ್ರಯಾಣಿಕರು ಬೆಂಕಿಯಿಂದ ಗಾಯಗೊಂಡಿದ್ದು, ಅವರನ್ನು ಮುಲ್ತಾನ್ ನ ನಿಸ್ತಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಕ್ಷಣಾ ತಂಡದ ವಕ್ತಾರರು ತಿಳಿಸಿದ್ದಾರೆ.
ಬಹುತೇಕ ಪ್ರಯಾಣಿಕರ ದೇಹ ಗುರುತು ಹಿಡಿಯಲಾರದಷ್ಟು ಸುಟ್ಟಿ ಹೋಗಿರುವುದಾಗಿ ವರದಿ ವಿವರಿಸಿದೆ. ಡಿಎನ್ ಎ ಪರೀಕ್ಷೆಯ ನಂತರ ಶವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.