ಬೆಂಗಳೂರು: ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ಮಾಜಿ ರಾಜ್ಯಪಾಲ, ಪಂಜಾಬ್- ಹರ್ಯಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ, ಮಾಜಿ ರಾಜ್ಯ ಸಭಾ ಸದಸ್ಯ ರಾಮ ಜೋಯಿಸ್ ಅವರು ಇಂದು ಮುಂಜಾನೆ ನಿಧನ ಹೊಂದಿದರು.
ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ರಾಮ ಜೋಯಿಸ್ ಅವರು ನಿಧನ ಹೊಂದಿದ್ದಾರೆ ಎಂದು ವರದಿಗಳು ತಿಳಿಸಿದೆ.
ಇದನ್ನೂ ಓದಿ:ಟೂಲ್‌ಕಿಟ್ ರಚಿಸಿದ್ದೇ ದಿಶಾ, ನಿಕಿತಾ, ಶಂತನು! ಟೆಲಿಗ್ರಾಂ ಮೂಲಕ ಥನ್‌ಬರ್ಗ್‌ಗೆ ರವಾನೆ
ಮಂಡಗದ್ದೆ ರಾಮ ಜೋಯಿಸ್ ಅವರು 1932ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯ ಅರಗ ಗ್ರಾಮದಲ್ಲಿ ಜನಿಸಿದ್ದರು. 89 ವರ್ಷದ ಪ್ರಾಯದ ರಾಮ ಜೋಯಿಸ್ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
1992ರಲ್ಲಿ ಹರ್ಯಾಣ ಮತ್ತು ಪಂಜಾಬ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಾಮ ಜೋಯಿಸ್ ಅವರು ಕಾರ್ಯ ನಿರ್ವಹಿಸಿದ್ದರು. 2002ರಲ್ಲಿ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ, 2003ರಲ್ಲಿ ಬಿಹಾರ ರಾಜ್ಯದ ರಾಜ್ಯಪಾಲರಾಗಿ ರಾಮ ಜೋಯಿಸ್ ಅವರು ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ವ್ಯಾಪಿಸುತ್ತಿದೆ ವಂಚಕರ ಜಾಲ! ನಕಲಿ ಫೇಸ್‌ಬುಕ್, ಟ್ವಿಟರ್ ಖಾತೆ ಬಗ್ಗೆ ಇರಲಿ ಎಚ್ಚರ
1975-77ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಬಿಜೆಪಿ ಪಕ್ಷದತ್ತ ಒಲವು ತೋರಿಸಿದ್ದ ಅವರು, ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದರು.