Advertisement
ರಘು ಹಲವು ವರ್ಷಗಳ ಕಾಲ “ಫುಡ್ ಆ್ಯಂಡ್ ನ್ಯೂಟ್ರಿಷಿಯನ್ ವರ್ಲ್ಡ್’ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಸ್ಥಾಪಿಸಿದ್ದ ಪ್ರಿಸ್ಟೀನ್ ಅರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ನೀಡುತ್ತಿದ್ದರು. ಅವರು ತುತ್ತು ತತ್ವ, ಆಹಾರ ರಾಜಕೀಯ, ರಸತತ್ವ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್.ರಾಮಯ್ಯ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ರಘು ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.