Advertisement

Food fair; ಮಾಂಸಾಹಾರಕ್ಕೆ ಅವಕಾಶವಿಲ್ಲ; ಉಪನ್ಯಾಸಕರೊಂದಿಗೆ ವಿದ್ಯಾರ್ಥಿನಿ ವಾಗ್ವಾದ

10:18 PM Aug 07, 2023 | Vishnudas Patil |

ಸಾಗರ: ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಆಹಾರ ಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದರ ವಿರುದ್ಧ ವಿದ್ಯಾರ್ಥಿನಿ ಉಪನ್ಯಾಸಕರ ವಿರುದ್ಧ ವಾಗ್ವಾದ ನಡೆಸಿದ ಘಟನೆ ಸೋಮವಾರ ನಡೆದಿದೆ.

Advertisement

ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ. ಇದು ವಾಗ್ವಾದಕ್ಕೆ ದಾರಿಯಾಗಿದೆ.

ಆಹಾರ ಮೇಳದ ನಿಯಮಗಳ ಬಗ್ಗೆ ಮೊದಲೇ ಸೂಚಿಸಲಾಗಿತ್ತು. ಆದರೂ ಮಾಂಸಾಹಾರ ತಂದಿರುವುದು ನಿಯಮದ ಉಲ್ಲಂಘನೆ ಎಂದು ಉಪನ್ಯಾಸಕರು ಹೇಳಿದರೆ, ಆಗ ವಿದ್ಯಾರ್ಥಿನಿಯರು ಆಹಾರ ಮೇಳದಲ್ಲಿ ಮಾಂಸಹಾರಕ್ಕೆ ನಿರ್ಬಂಧ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದಾಗ ನಾವು ಹೇಳಿದ್ದನ್ನು ಕೇಳಬೇಕು ಎಂದು ಉಪನ್ಯಾಸಕರು ತಾಕೀತು ಮಾಡಿದ್ದಾರೆ.

ನಂತರ ಅಹಾರ ಮೇಳದಲ್ಲಿ ಮಾಂಸಹಾರಕ್ಕೆ ಅವಕಾಶ ನೀಡಲಾಯಿತು. ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next