Advertisement

ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್‌

04:55 PM May 18, 2020 | Suhan S |

ಬ್ಯಾಡಗಿ: ತಹಶೀಲ್ದಾರ್‌ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ವಿತರಿಸಿದರು.

Advertisement

ನಂತರ ಮಾತನಾಡಿದ ಅವರು, ಅತಂತ್ರರಾದ ಎಲ್ಲರವನ್ನೂ ಪತ್ತೆ ಹಚ್ಚುವ ಮೂಲಕ ವಲಸೆ ಕಾರ್ಮಿಕರ ಸಂಕಷ್ಟಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸ್ಪಂದಿಸಿವೆ. ಪ್ರತಿಯೊಬ್ಬ ವ್ಯಕ್ತಿಯ ಜೀವಕ್ಕೂ ಬೆಲೆಯಿದೆ. ಜಿಲ್ಲೆಯಲ್ಲಿ ಹೊರಗಿನಿಂದ ಬಂದವರಿಂದಲೇ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಬೇರೆ ಬೇರೆ ಪ್ರದೇಶಗಳಿಂದ ರೈತರು, ಚಾಲಕರು ಲಾರಿಗಳ ಮೂಲಕ ಪಟ್ಟಣಕ್ಕೆ ಬರುತ್ತಿದ್ದು, ಸ್ಥಳೀಯ ಎಪಿಎಂಸಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಕೂಲಿ ಕಾರ್ಮಿಕರು ಬಹಳಷ್ಟು ಎಚ್ಚರಿಕೆಯಿಂದಿರುವಂತೆ ಮನವಿ ಮಾಡಿದರು.

ತಹಶೀಲ್ದಾರ್‌ ಶರಣಮ್ಮ ಕಾರಿ, ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಬಿಜೆಪಿ ತಾಲೂಕಾಧ್ಯಕ್ಷ ಸುರೇಶ ಅಸಾದಿ, ಮಾಜಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಕಾರ್ಯದರ್ಶಿ ವೀರೇಂದ್ರ ಶೆಟ್ಟರ, ಪುರಸಭೆ ಸದಸ್ಯರಾದ ಶಿವಯೋಗಿ ಅಂಗಡಿ, ಮೆಹಬೂಬ್‌ ಅಗಸನಹಳ್ಳಿ, ಮುಖಂಡರಾದ ಶಿವಬಸಪ್ಪ ಕುಳೇನೂರ, ಅರುಣ ಪಾಟೀಲ, ಸಂಜೀವ ಮಡಿವಾಳರ, ವಿಷ್ಣುಕಾಂತ ಬೆನ್ನೂರ, ಮಂಜುನಾಥ ಪೂಜಾರ, ಶಿವಯೋಗಿ ಗಡಾದ ಸೇರಿದಂತೆ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next