Advertisement
ಈ ಕುರಿತು ಹೊಸದಿಲ್ಲಿಯಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಣ್ಣ, ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ.
ಐಎಂಎಫ್‌ನ ಪರಿಷ್ಕೃತ ವರದಿಯಂತೆ 2025ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.7 ಆಗಲಿದೆ. ಜಾಗತಿಕ ಆರ್ಥಿಕತೆಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಪ್ರಧಾನಿ ಮೋದಿ ಭಾರತವನ್ನು ಉನ್ನತ ಸ್ತರಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂಬುದಕ್ಕೆ ಐಎಂಎಫ್ ವರದಿ ನಿದರ್ಶನವಾಗಿದೆ. ಭಾರತದ ಜಿಡಿಪಿ ಬೆಳವಣಿಗೆ 2025ರ ವೇಳೆಗೆ ಶೇ.7 ಆಗಲಿದೆ ಎಂಬ ಮುನ್ಸೂಚನೆ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದೆ ಎಂದು ಜೋಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.