Advertisement

Food Market; ಬೇಳೆ, ಕಾಳುಗಳ ದರ ಇಳಿಸದಿದ್ದರೆ ಕಠಿನ ಕ್ರಮ: ಕೇಂದ್ರ ಸಚಿವ ಜೋಶಿ

11:30 PM Jul 17, 2024 | Team Udayavani |

ಹುಬ್ಬಳ್ಳಿ: ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ ಮತ್ತು ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ. 4 ಕುಸಿತವಾಗಿದ್ದರೂ ವ್ಯಾಪಾರಿಗಳು ಮಾತ್ರ ದರ ಇಳಿಕೆ ಮಾಡದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ-ಕಾಳುಗಳ ದರ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದ್ದಾರೆ.

Advertisement

ಈ ಕುರಿತು ಹೊಸದಿಲ್ಲಿಯಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಣ್ಣ, ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ.

ಆದರೆ ದೊಡ್ಡ ದೊಡ್ಡ ವ್ಯಾಪಾರ ಮಳಿಗೆಗಳಲ್ಲಿ ಬೆಲೆ ಇಳಿಕೆ ಮಾಡದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ದೊಡ್ಡ ವರ್ತಕರಿಗೆ ಈಗಾಗಲೇ ಬೇಳೆ ಕಾಳುಗಳ ದರ ಇಳಿಕೆಗೆ ಸೂಚನೆ ನೀಡಲಾಗಿದೆ. ಬೆಲೆ ಇಳಿಕೆಗೆ ಮುಂದಾಗದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಶೇ.7ರ ಜಿಡಿಪಿ ಬೆಳವಣಿಗೆ:
ಐಎಂಎಫ್‌ನ ಪರಿಷ್ಕೃತ ವರದಿಯಂತೆ 2025ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.7 ಆಗಲಿದೆ. ಜಾಗತಿಕ ಆರ್ಥಿಕತೆಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಪ್ರಧಾನಿ ಮೋದಿ ಭಾರತವನ್ನು ಉನ್ನತ ಸ್ತರಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂಬುದಕ್ಕೆ ಐಎಂಎಫ್‌ ವರದಿ ನಿದರ್ಶನವಾಗಿದೆ. ಭಾರತದ ಜಿಡಿಪಿ ಬೆಳವಣಿಗೆ 2025ರ ವೇಳೆಗೆ ಶೇ.7 ಆಗಲಿದೆ ಎಂಬ ಮುನ್ಸೂಚನೆ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದೆ ಎಂದು ಜೋಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next