ತಮಿಳುನಾಡು : ಶಿಶುಪಾಲನಾ ಕೇಂದ್ರದಲ್ಲಿ ವಿಷಾಹಾರ ಆಹಾರ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ್ದು, 11 ಮಕ್ಕಳು ಆಸ್ಪತ್ರೆಗೆ ದಾಖಲಾದ ಘಟನೆ ತಮಿಳುನಾಡಿನ ತಿರುಪ್ಪೂರ್‌ನಲ್ಲಿ ನಡೆದಿದೆ.
ತಿರುಪ್ಪೂರ್‌ನಲ್ಲಿರುವ ವಿವೇಕಾನಂದ ಸೇವಾಲಯಂ ಶಿಶುಪಾಲನಾ ಕೇಂದ್ರದಲ್ಲಿ ಘಟನೆ ನಡೆದಿದ್ದು ಬುಧವಾರ ರಾತ್ರಿ ಆಹಾರ ಸೇವಿಸಿದ ಬಳಿಕ ಕೆಲವು ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲಿ ಅರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ತಿರುಪ್ಪೂರ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಸುಮಾರು ಹನ್ನೊಂದು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಮೂರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆಸ್ಪತ್ರೆಗೆ ಭೇಟಿ ನೀಡಿದ ತಿರುಪ್ಪೂರ್ ಜಿಲ್ಲಾಧಿಕಾರಿ ಎಸ್. ವಿನೀತ್ ಅವರು ಮಕ್ಕಳ ಅರೋಗ್ಯ ವಿಚಾರಿಸಿ ಬಳಿಕ ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳು ಸೇವಿಸಿದ ಆಹಾರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ಆದೇಶಿಸಿದ್ದಾರೆ, ವರದಿಯ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದಿದ್ದಾರೆ.
ಇದನ್ನೂ ಓದಿ : ಅಕ್ಟೋಬರ್ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್ ಕುಮಾರ್