ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕು ಹರಡದಂತೆ ತಡೆಗೆ ಘೋಷಿಸಲಾಗಿರುವ ಲಾಕ್‌ಡೌನ್‌ನಿಂದ ಸಾಮಾನ್ಯ ಜನರ ಜೀವನ ಅಸ್ತವ್ಯಸ್ಥಗೊಂಡಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಕ್ಷೇತ್ರದ ಸುಮಾರು 50 ಸಾವಿರ ಬಡ ಕುಟುಂಬ ಗಳಿಗೆ ಆಹಾರ ಕಿಟ್ ವಿತರಣೆಗೆ ಮುಂದಾಗಿದ್ದಾರೆ.
ಶುಕ್ರವಾರ ಕ್ಷೇತ್ರಕ್ಕೆ ಆಗಮಿಸಿದ್ದ ಸಚಿವ ಡಾ.ಕೆ.ಸುಧಾಕರ್, ಕ್ಷೇತ್ರದ ಬಡ ಜನರ ಅನುಕೂಲಕ್ಕಾಗಿ ಹಮ್ಮಿಕೊಂಡಿರುವ ಆಹಾರ ಪಡಿತರ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ಆಹಾರ ಕಿಟ್‌ನಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಉಪ್ಪು, ಹುಣಸೆ ಹಣ್ಣು, ಮೆಣಸಿನಪುಡಿ, ಸಾಂಬರ್ ಪುಡಿ, ಎಣ್ಣೆ ಸೇರಿದಂತೆ ವಿವಿಧ ಪದಾರ್ಥಗಳನ್ನು ಒದಗಿಸಲಾಗಿದೆ ತಮ್ಮ ಶ್ರೀ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್‌ನಿಂದ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಇದ್ದರು.