Advertisement

ಹಿಂದುತ್ವ ಗುಂಪುಗಳು ಮುಸ್ಲಿಂ ಹುಡುಗಿಯರಿಗೆ ಕಿರುಕುಳ ನೀಡುತ್ತಿದೆ: ಫುಟ್ ಬಾಲ್ ತಾರೆ ಪೋಗ್ಬಾ

08:57 AM Feb 11, 2022 | Team Udayavani |

ಹೊಸದಿಲ್ಲಿ: ಫ್ರೆಂಚ್ ಫುಟ್‌ಬಾಲ್ ತಾರೆ ಪಾಲ್ ಪೋಗ್ಬಾ ಅವರು ಕರ್ನಾಟಕದ ಬುರ್ಖಾ ಧರಿಸಿದ ಹುಡುಗಿಯರು ಮತ್ತು ಕೇಸರಿ ಶಾಲು ಧರಿಸಿದ ಹುಡುಗರ ನಡುವಿನ ಮುಖಾಮುಖಿಯ ಪ್ರತಿಭಟನೆಯ ವೀಡಿಯೊ ಕ್ಲಿಪ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Advertisement

ಫುಟ್‌ಬಾಲ್ ಆಟಗಾರ ಪೋಗ್ಬಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಮೂಲತಃ _.islamismydeen._ ಹೆಸರಿನ ಖಾತೆಯಿಂದ ಪೋಸ್ಟ್ ಮಾಡಿದ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ” ಭಾರತದಲ್ಲಿ ಹಿಂದುತ್ವದ ಗುಂಪುಗಳು ಹಿಜಾಬ್ ಧರಿಸಿ ಕಾಲೇಜಿಗೆ ಹೋಗುವ ಮುಸ್ಲಿಂ ಹುಡುಗಿಯರಿಗೆ ಕಿರುಕುಳ ನೀಡುತ್ತಲೇ ಇರುತ್ತವೆ.” ಎಂದು ಬರೆದುಕೊಂಡಿದ್ದಾರೆ.

ಪೋಗ್ಬಾ ಅವರು ಮಾನವ ಹಕ್ಕುಗಳ ಕಾರ್ಯಕರ್ತೆ ಮಲಾಲಾ ಯೂಸುಫ್‌ ಜಾಯ್ ನಂತರ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಎರಡನೇ ಪ್ರಮುಖ ಅಂತಾರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್‌ಜಾಯ್ ಅವರು ಈ ಹಿಂದೆ ಕರ್ನಾಟಕದಲ್ಲಿ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದರು, “ಹೆಣ್ಣುಮಕ್ಕಳು ತಮ್ಮ ಹಿಜಾಬ್‌ ನಲ್ಲಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕವಾಗಿದೆ. ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ:ಜಗತ್ತಿನ ಅತೀ ಉದ್ದದ ಅಟಲ್‌ ಸುರಂಗಕ್ಕೆ ವಿಶ್ವದಾಖಲೆ ಗೌರವ

Advertisement

ಈತನ್ಮಧ್ಯೆ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾ. ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಗುರುವಾರ ಹಿಜಾಬ್ ಧರಿಸುವುದರ ಮೇಲಿನ ನಿರ್ಬಂಧಗಳ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನಡೆಸಿತು. ಫೆಬ್ರವರಿ 14ರ ಸೋಮವಾರದಂದು ಮತ್ತೊಮ್ಮೆ ವಿಚಾರಣೆ ನಡೆಸಲು ಪೀಠವು ನಿರ್ಧರಿಸಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವವರೆಗೆ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸದಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next