Advertisement
ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಕುಟುಂಬದ ಸತ್ಯ ಕಥೆಯಿದು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಹೇಮಾವತಿಯ ಉಪ ನದಿಯಾದ ಸೋಮಾವತಿ ಮಳೆಗಾಲದಲ್ಲಿ ತುಂಬಿ ಹರಿದು ಹೇಮಾವತಿ ಸೇರುತ್ತದೆ. ಆ ನದಿಯ ಮತ್ತೊಂದು ಬದಿಯಲ್ಲಿ ಸುರೇಶ್ ನಾಯ್ಕ್ ಕುಟುಂಬ ಅನೇಕ ವರ್ಷದಿಂದ ಸೂರು ಕಟ್ಟಿಕೊಂಡು ಜೀವನ ನಡೆಸುತ್ತಿದ್ದು ಮಳೆಗಾಲ ಬಂತೆಂದರೆ ರಸ್ತೆ ಸಂಪರ್ಕವೂ ಇಲ್ಲದೇ ಜೀವ ಭಯದಲ್ಲೇ ಜೀವನ ನಡೆಸಿ ಸಂಪರ್ಕ ಕಸಿದು ಹೋಗುತ್ತಿದೆ. ಕುಟುಂಬ ಹಳ್ಳ ದಾಟಿ ಮನೆ ತಲುಪುವ ಸಾಹಸದ ಕೆಲಸಕ್ಕೆ ಇವರು ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ. ಅಪಾಯಕಾರಿ ಕಾಲುಸಂಕ (ಮರದದಿಮ್ಮಿಯ ಜೋಡಣೆ)ದಾಟಿ ಮನೆ ಸೇರುವುದು ಇವರಿಗೆ ಅನಿವಾರ್ಯತೆಯಾಗಿದೆ. ತುಂಬಿ ಹರಿಯುವ ಸೋಮಾವತಿ ಹಳ್ಳವನ್ನು ದಾಟಿ ಆಚೇಗಿನ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡಲು ಅನುಕೂಲ ಇಲ್ಲದ ಕಾರಣಕ್ಕೆ ನೂರಾರು ಎಕರೆ ಫಲವತ್ತಾದ ಗದ್ದೆಗಳು ಕೃಷಿ ಮಾಡದೇ ಪಾಳು ಬಿಟ್ಟು ಬರಡಾಗಿವೆ. ಈ ಪ್ರದೇಶಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಗೆ, ಶಾಸಕರಿಗೆ ಮೂರು ವರ್ಷದಿಂದ ಸಂತ್ರಸ್ತ ಸುರೇಶ್ ಕುಟುಂಬ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೂ ಕಾಲು ಸಂಕ ಮಾತ್ರ ಬದಲಾಗಿಲ್ಲ. ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಮೂಲಭೂತ ಸಂಪರ್ಕದ ಆಸರೆ ಸಿಗದೇ ಪರದಾಡುವಂತಾಗಿದೆ.
Related Articles
Advertisement
-ಸುರೇಶ್ ನಾಯ್ಕ್, ಸಂತ್ರಸ್ತ,ಕೊಟ್ಟಿಗೆಹಾರ.
– ಸಂತೋಷ್ ಅತ್ತಿಗೆರೆ,