Advertisement

ಫ‌ುಟ್‌ಪಾತ್‌ ಮಾರ್ಗದ ಒತ್ತುವರಿ ತೆರವು

06:07 AM Jan 25, 2019 | |

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಿರುವ ಬಿಬಿಎಂಪಿ, ಗುರುವಾರ ಹಳೇ ಮದ್ರಾಸ್‌ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ತಾತ್ಕಾಲಿಕ ಅಂಗಡಿಗಳು, ಶೆಡ್‌ಗಳನ್ನು ತೆರವುಗೊಳಿಸಿತು. 

Advertisement

ಕೆ.ಆರ್‌.ಪುರ, ಬಸವನಪುರ ಹಾಗೂ ದೇವಸಂದ್ರ ವಾರ್ಡ್‌ಗಳಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಐಟಿಐನಿಂದ ಟಿ.ಸಿ.ಪಾಳ್ಯ ಸಿಗ್ನಲ್‌, ಹಳೇ ಮದ್ರಾಸ್‌ರಸ್ತೆವರೆಗೆ ಸುಮಾರು 8 ಕಿ.ಮೀ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗದಲ್ಲಿ ಹಾಕಲಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಮತ್ತೆ ಅಂಗಡಿಗಳನ್ನು ತೆರೆದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಲಾಯಿತು. ಮಹದೇವಪುರ ವಲಯದ ಮುಖ್ಯಎಂಜಿನಿಯರ್‌ ಆರ್‌.ಎಲ್‌. ಪರಮೇಶ್ವರಯ್ಯ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರಂತರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಅನುಕೂಲವಾಗುವಂತೆ ಇಬ್ಬರು ಕಾಯಂ ಭೂ ಮಾಪಕರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಅವರನ್ನು ಬಳಸಿಕೊಂಡು ನಿರಂತರವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಬೃಹತ್‌ ಮಳೆನೀರುಗಾಲುವೆ ವಿಭಾಗದ ಮುಖ್ಯ ಇಂಜಿನಿಯರ್‌ ಪ್ರಹ್ಲಾದ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next