Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ “ನಮ್ಮ ಮೆಟ್ರೋ’ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, “ಮೆಟ್ರೋ ಎರಡನೇ ಹಂತದ ಯೋಜನೆಯನ್ನು ತ್ವರಿತ ಗತಿಯಲ್ಲಿ ಮಾಡಲಾಗುತ್ತಿದೆ. 2020ರ ಸ್ವಾತಂತ್ರ್ಯ ದಿನಾಚರಣೆಯಂದು ಅಂದರೆ ಆಗಸ್ಟ್ 15ರಂದು ಕನಕಪುರ ರಸ್ತೆಯ ಯಲಚೇನಹಳ್ಳಿಯಿಂದ ಅಂಜನಾಪುರ ಮತ್ತು ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮಾರ್ಗವನ್ನು ಲೋಕಾರ್ಪಣೆ ಮಾಡುವ ಗುರಿ ಇದೆ’ ಎಂದು ಹೇಳಿದರು.
Related Articles
Advertisement
ಅದೇ ರೀತಿ, 2ನೇ ಹಂತ ಬಿ’ ಅಡಿ ಕೆ.ಆರ್.ಪುರದಿಂದ ವಿಮಾನ ನಿಲ್ದಾಣದವರೆಗೆ 38 ಕಿ.ಮೀ. ಉದ್ದದ ಮೆಟ್ರೋ ಮಾರ್ಗವನ್ನು ರೂ. 10,584 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ. ವಿಜಯಭಾಸ್ಕರ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಇತರರು ಉಪಸ್ಥಿತರಿದ್ದರು.
ಸುರಕ್ಷತೆಗೆ ಆದ್ಯತೆ ಕೊಡಿ – ಸಿಎಂ: “ಇತ್ತೀಚೆಗೆ ಮೆಟ್ರೋ ನಿಲ್ದಾಣದಲ್ಲಿ ಅವಘಡ ಉಂಟಾಗಿ ಪ್ರಾಣಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲಿಯೂ ಅಪಘಾತ, ಅವಘಡವಾಗದಂತೆ ಎಚ್ಚರಿಕೆ ವಹಿಸಬೇಕು. ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸದೆ, ದುರಸ್ತಿ ಕೆಲಸಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಎಂಜಿನಿಯರ್‌ಗಳ ತಂಡಗಳು ನಿಯಮಿತವಾಗಿ ಮೆಟ್ರೋ ಪಿಲ್ಲರ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ವಿಶೇಷ ಸಂದರ್ಭಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ನಿಭಾಯಿಸಲು ಮೆಟ್ರೋ ಸಮಯ ವಿಸ್ತರಣೆ ಮಾಡಬೇಕು,’ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.