Advertisement
ಫೆಬ್ರವರಿ ತಿಂಗಳಲ್ಲಿ ಸಾಮಾನ್ಯವಾಗಿ 30-35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತದೆ. ಆದರೆ, ರಾಜ್ಯ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ 38-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಒಣಹವೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Related Articles
ಬೆಂಗಳೂರಿನಲ್ಲಿಯೂ ಗರಿಷ್ಠ ತಾಪಮಾನ ಫೆಬ್ರವರಿ ಅಂತ್ಯಗೊಳ್ಳುವ ಮೊದಲೇ 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇನ್ನು ಕೆಲವು ದಿನಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ಏರುವ ಸಾಧ್ಯತೆಯಿದೆ. ಜತೆಗೆ ಮುಂಜಾನೆ 15-17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನವಿದ್ದರೆ, ಮಧ್ಯಾಹ್ನದ ವೇಳೆ 30 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ.
Advertisement
ಫೆ.25ರಂದು ದಾಖಲಾದ ತಾಪಮಾನಕೇಂದ್ರ ಗರಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌ಗಳಲ್ಲಿ)
ಬಳ್ಳಾರಿ 40
ಕಲಬುರಗಿ 39
ರಾಯಚೂರು 38.5
ಗದಗ 36.4
ಮಂಡ್ಯ 36.4
ವಿಜಯಪುರ 36.5
ಮೈಸೂರು 35.5
ಬೆಂಗಳೂರು 35.5 ಹದಿನೈದು ದಿನಗಳ ಮೊದಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು, ಶುಭ್ರ ಆಕಾಶ ಹಾಗೂ ವಾತಾವರಣದಲ್ಲಿ ತೇವಾಂಶವಿಲ್ಲದ ಕಾರಣದಿಂದ ಉಷ್ಣಾಂಶ ಹೆಚ್ಚಾಗಿದ್ದು, ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.
– ಶ್ರೀನಿವಾಸರೆಡ್ಡಿ, ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧ್ಯಕ್ಷ – ವೆಂ. ಸುನೀಲ್‌ಕುಮಾರ್