ನವದೆಹಲಿ: ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಗುರುವಾರ (ನವೆಂಬರ್ 17)ಆಮ್ ಆದ್ಮಿ ಪಕ್ಷದ ಮುಖಂಡ ಸತ್ಯೇಂದ್ರ ಜೈನ್ ಜಾಮೀನು ಮನವಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ:ಕ್ಯೂ-ಆರ್ ಕೋಡ್ ಜತೆ ಬರಲಿವೆ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ! ಕಳ್ಳತನ ತಡೆಗೆ ಹೊಸ ಕ್ರಮ
ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಸೇರಿದಂತೆ ಇನ್ನಿಬ್ಬರು ಸಹ ಆರೋಪಿತರಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಜಾಮೀನು ಅರ್ಜಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಮೇ 30ರಂದು ಬಂಧಿಸಿತ್ತು.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ 2017ರ ಆಗಸ್ಟ್ 24ರಂದು ಸತ್ಯೇಂದ್ರ ಜೈನ್ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ವರದಿ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು.
ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಎರಡನೇ ಬಾರಿ ವಜಾಗೊಳಿಸಿದಂತಾಗಿದೆ. ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಜೂನ್ ತಿಂಗಳಿನಲ್ಲಿ ಜೈನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಸತ್ಯೇಂದ್ರ ಜೈನ್ ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ಜೈನ್ ತನಿಖಾ ಸಂಸ್ಥೆಯ ಹಾದಿ ತಪ್ಪಿಸುತ್ತಿದ್ದು, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿತ್ತು.