Advertisement

ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ಕೆ ಮಾತ್ರ ಮೊಬೈಲ್ ಬಳಕೆ: ಸಚಿವ ಸುರೇಶ್ ಕುಮಾರ್

10:07 AM Jan 28, 2020 | sudhir |

ಕಲಬುರಗಿ: ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಬಗ್ಗೆ ಚಿಂತನೆ ಮಾಡಲಾಗುತ್ತಿದ್ದು, ಶಿಕ್ಷಕರು ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ತಮ್ಮ ಮೊಬೈಲ್ ಬಳಸಬೇಕೆಂದು ಸೂಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

Advertisement

ನಗರದಲ್ಲಿ 101 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಅವಧಿಯಲ್ಲಿ ಶೈಕ್ಷಣಿಕ ವಿಚಾರ ಹೊರತುಪಡಿಸಿ ಶಿಕ್ಷಕರು ಮೊಬೈಲ್ ಬಳಕೆ ಮಾಡಬಾರದು ಅಂತಾ ಬಿಇಒ, ಡಿಡಿಪಿಐ ಮೂಲಕ ಈಗಾಗಲೇ ಹೇಳುತ್ತಿದ್ದೇವೆ ಎಂದು ತಿಳಿಸಿದರು.

ಮೊಬೈಲ್ ಬಳಕೆಯಿಂದ, ಪಬ್ ಜೀ ಅಂತಹ ಗೇಮ್ ಗಳಿಂದ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಸಂಗ ನೋಡಿದ್ದೇವೆ. ರಾಜ್ಯದ ಹಲವು ತಾಲೂಕುಗಳಲ್ಲಿ ಪೋಷಕರು ಕೂಡ ಮಕ್ಕಳಿಗೆ ಹೋಮ್ ವರ್ಕ್ ಮಾಡಿಸುವ ವೇಳೆ ಮೊಬೈಲ್ ಬಳಕೆ ಮಾಡದಿರಲು ಪ್ರತಿಜ್ಞೆ ಮಾಡಿದ್ದಾರೆ. ಕೆಲವರು ಕೇಬಲ್ ಕಟ್ ಮಾಡಿಸಿದ್ದಾರೆ ಎಂದರು.

ಮೊಬೈಲ್ ಬಳಕೆ ಮಾಡಲೇ ಬಾರದು ಅನ್ನೋದು ತಪ್ಪು. ಮೊಬೈಲ್ ನಿಂದ ಸಾಕಷ್ಟು ಅನುಕೂಲ ಇದೆ. ಆದರೆ ಮಕ್ಕಳನ್ನು ಮೊಬೈಲ್ ನಿಂದ ದೂರು ಇರುವ ಹಾಗೆ ನೋಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಬ್ಯಾಗ್ ಲೆಸ್ ಡೇ: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರತಿ ತಿಂಗಳ ಎರಡು ಶನಿವಾರ ಬ್ಯಾಗ್ ಲೆಸ್ ಡೇ ಮಾಡುವ ಚಿಂತನೆ ಕೂಡ ನಡೆದಿದೆ ಎಂದು ಸಚಿವ ಸುರೇಶ್ ಕುಮಾರ್ ಇದೇ ವೇಳೆ ತಿಳಿಸಿದರು.

Advertisement

ತಿಂಗಳ ಎಲ್ಲ ಶನಿವಾರ ಅಥವಾ ಎರಡು ವಾರ ಮಾತ್ರವೇ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಬ್ಯಾಗ್ ಲೆಸ್ ಡೇ ದಿನ ಶಾಲೆಯಲ್ಲಿ ಪಾಠ ಇರುವುದಿಲ್ಲ. ಬದಲಾಗಿ ಆಟದ ಜೊತೆಗೆ ಇತರೆ ಚಟುವಟಿಕೆಗಳು ಇರುತ್ತವೆ‌. ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಕರೇ ಪೋಷಕರಾಗಬೇಕು ಅಂತಾ ಹೇಳಿದರು.

ಹತ್ತನೇ ತರಗತಿ ಪರೀಕ್ಷೆಗೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಅದೇ ರೀತಿ 7ನೇ ತರಗತಿಗೂ ಹೆಚ್ಚು ಒತ್ತು ಕೊಡಲಾಗುತ್ತಿದೆ. 7ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಅಂತಾ ಮಾಡಲು ತೀರ್ಮಾನ ಮಾಡಲಾಗುತ್ತಿದೆ‌. ಆದರೆ ಯಾರನ್ನು ಫೇಲ್ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಪರೀಕ್ಷಾ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಕಲಬುರಗಿಯನ್ನು ಎರಡು ಶೈಕ್ಷಣಿಕ ಜಿಲ್ಲೆಗಳಾಗಿ ವಿಂಗಡಿಸುವ ಯೋಚನೆ ಇದೆ. ಈ ಬಗ್ಗೆ ಮುಂದಿನ ವರ್ಷ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next