ನವದೆಹಲಿ: ವಿಶ್ವದಾದ್ಯಂತ ಒಮಿಕ್ರಾನ್ ಹಾಗೂ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಗಣರಾಜ್ಯೋತ್ಸವ ದಿನಾಚರಣೆಯಂದು ವಿದೇಶಿ ಮುಖ್ಯ ಅತಿಥಿಗಳು ಪಾಲ್ಗೊಳ್ಳುತ್ತಿಲ್ಲ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ತೀವ್ರ ವಿರೋಧ: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ವಾಪಸ್ ಸಾಧ್ಯತೆ?
ಗಣರಾಜ್ಯೋತ್ಸವ ದಿನಾಚರಣೆ(ಜನವರಿ 26)ಗೆ ಐದು ಮಧ್ಯ ಏಷ್ಯಾ ರಾಷ್ಟ್ರಗಳ ಮುಖ್ಯಸ್ಥರಿಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವಂತೆ ಭಾರತ ಆಹ್ವಾನ ನೀಡಿತ್ತು. ಭಾರತದಲ್ಲಿ ಮಂಗಳವಾರವೂ ಎರಡು ಲಕ್ಷಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿದೆ.
ದೇಶದಲ್ಲಿ 24ಗಂಟೆಯಲ್ಲಿ 2,38,018 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 8,891 ಒಮಿಕ್ರಾನ್ ಪ್ರಕರಣ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿತ್ತು.
2021ರ ಜನವರಿ 26ರಂದು ಗಣರಾಜ್ಯೋತ್ಸವದಲ್ಲಿ ಭಾಗವಹಿಸುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಬ್ರಿಟನ್ ನಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾದ ಪರಿಣಾಮ ಜಾನ್ಸನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿರಲಿಲ್ಲವಾಗಿತ್ತು.