Advertisement
ಜೀವಸತ್ವ ಮತ್ತು ಖನಿಜಾಂಶ ಆಹಾರವಯಸ್ಸಾದಂತೆ, ದೇಹಕ್ಕೆ ಶಕ್ತಿಯ ಆವಶ್ಯಕತೆ ಕಡಿಮೆಯಾಗುವುದಂತೂ ನಿಜ. ಅದಕ್ಕಾಗಿ ಅವರ ಆಹಾರ ಸೇವನೆಯೂ ಕಡಿಮೆ ಇರಬೇಕಾಗುತ್ತದೆ. ಆಹಾರದ ಆವಶ್ಯಕತೆ ಕಡಿಮೆಯಾದರೂ ಯಥೇತ್ಛವಾದ ತರಕಾರಿ, ಸೊಪ್ಪು, ಹಣ್ಣುಗಳ ಸೇವನೆ ಒಳಿತು.
ಕರಿದ ಪದಾರ್ಥಗಳು, ಅತೀ ಖಾರದ ಪದಾರ್ಥ, ಜಿಡ್ಡು ಭರಿತ ಆಹಾರ ಸೇವನೆ ಮಿತಿಯಾಗಿರಬೇಕು. ಹೊಟ್ಟೆಭಾರ, ಆ್ಯಸಿಡಿಟಿ, ತುಂಬಾ ಊಟ ಮಾಡುವುದು ಕಷ್ಟ ಎಂಬಂಥ ತೊಂದರೆಗಳನ್ನು ವಯಸ್ಸಾದವರು ಹೇಳುತ್ತಿರುತ್ತಾರೆ. ಟೀ, ಕಾಫಿ ಸೇವನೆ ಮಿತಿಯಾಗಿರಬೇಕು. ನೀರು, ಮಜ್ಜಿಗೆ, ಹಾಲು, ಸಕ್ಕರೆಯಿಲ್ಲದ ಹಣ್ಣಿನ ರಸ ಆಹಾರವನ್ನು ಹೆಚ್ಚು ಸೇವಿಸಬಹುದು. ದುಶ್ಚಟಗಳಿಂದ ಅಂತರ
ಈ ವಯಸ್ಸಿನಲ್ಲಿ ಮದ್ಯಪಾನ ಹಾಗೂ ಯಾವುದೇ ರೀತಿಯ ತಂಬಾಕಿನ ಸೇವನೆಗೆ ವಿದಾಯ ಹೇಳಬೇಕು. ದಿನದಲ್ಲಿ 3-4 ಬಾರಿ ಸಣ್ಣ ಪ್ರಮಾಣದ ಆಹಾರ ಸೇವನೆ ಒಳಿತು. ಉಪಾ ಹಾರ, ಮಧ್ಯಾಹ್ನ ಊಟ, ಸಂಜೆ ಉಪಾಹಾರ, ರಾತ್ರಿ ಊಟ ಎಂಬಂತೆ 4 ಗಂಟೆಗಳಿಗೊಮ್ಮೆ ಸ್ವಲ್ಪ ಸ್ವಲ್ಪವೇ ಆಹಾರ ಸೇವಿಸಬೇಕು.
Related Articles
ವಯಸ್ಸಾದವರಿಗೆ ಹಲ್ಲಿನ ಸಮಸ್ಯೆಯೂ ಸಾಮಾನ್ಯ. ಅಲುಗಾಡುವ ಹಲ್ಲುಗಳು, ಹಲ್ಲುಗಳಿಲ್ಲದ ದವಡೆ, ಕಟ್ಟಿಸಿಕೊಂಡ ಕೃತಕ ದಂತ ಪಂಕ್ತಿ ಇವೆಲ್ಲವೂ ಪಚನ ಕ್ರಿಯೆಗೆ ತೊಡಕುಂಟು ಮಾಡಬಹುದು. ಸರಿಯಾಗಿ ಆಹಾರವನ್ನು ಜಗಿಯಲಾಗದೇ ಇರುವುದರಿಂದ ಮೆತ್ತಗಿನ ಆಹಾರ ಸೇವನೆ ಒಳ್ಳೆಯದು. ಗಟ್ಟಿಯಾದ ತರಕಾರಿಯನ್ನು ತುರಿದು ಸೇವಿಸಬೇಕು. ಕಿಚಡಿ, ಹಣ್ಣಿನ ರಸ, ಗಂಜಿ ಮುಂತಾದವು ಸೇವನೆಗೆ ಉತ್ತಮ.
Advertisement
- ಸುಶ್ಮಿತಾ ಜೈನ್