Advertisement

ವಸತಿ ಗೃಹಗಳ ನಿರ್ಮಾಣಕ್ಕೆ ಅಡಿಗಲ್ಲು

11:33 AM Dec 21, 2019 | Team Udayavani |

ಚಿಂಚೋಳಿ: ಪಟ್ಟಣದ ಬಸ್‌ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಾಲಕರು ಮತ್ತು ನಿರ್ವಾಹಕರಿಗೆ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ 2 ಕೋಟಿ ರೂ. ಮಂಜೂರುಗೊಳಿಸಿ ನೌಕರರ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.

Advertisement

ಪಟ್ಟಣದ ಬಸ್‌ ಡಿಪೋ ಎದುರಿನಲ್ಲಿ 12 ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ ಮತ್ತು ನಿರ್ವಾಹಕರಿಗೆ ವಸತಿ ಗೃಹ ಇಲ್ಲದ ಕಾರಣ ಸಾಕಷ್ಟು ತೊಂದರೆ ಪಡುತ್ತಿದ್ದರು. ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ವಸತಿ ಗೃಹಗಳನ್ನು ಮಂಜೂರು ಗೊಳಿಸಲಾಗುವುದು ಎಂದರು. ತಾಲೂಕಿನ ಎಲ್ಲ ಕಡೆಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಮಾಡಲಾಗಿದೆ.

ಎಲ್ಲ ಗ್ರಾಮ ಮತ್ತು ತಾಂಡಾಗಳಿಗೆ ಬಸ್‌ ಓಡಿಸಿ ಜನರಿಗೆ ಅನುಕೂಲ ಮಾಡಬೇಕು. ಶ್ರೀಮಂತರು ಖಾಸಗಿ ವಾಹನಗಳಿಗೆ ತಮ್ಮ ಗ್ರಾಮಗಳಿಗೆ ಹೋಗುತ್ತಾರೆ. ಆದರೆ ಬಡವರು ಸರ್ಕಾರಿ ಬಸ್‌ ಮೇಲೆ ಅವಲಂಬಿತರಾಗಿದ್ದಾರೆ. ಆದ್ದರಿಂದ ಎಲ್ಲ ಮಾರ್ಗಗಳಲ್ಲಿ ಬಸ್‌ ಸಂಚಾರ ಮಾಡಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಡಾ| ಅವಿನಾಶ ಜಾಧವ ಮಾತನಾಡಿ, ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ನಡೆಸಬೇಕು. ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದರು. ಸಮಾರಂಭದಲ್ಲಿ ಭೀಮಶೆಟ್ಟಿ ಮುರುಡಾ, ಬಾಬುರಾವ್‌ ಪಾಟೀಲ, ಜಗದೀಶಸಿಂಗ್‌ ಠಾಕೂರ, ರಾಜು ಪವಾರ, ಶ್ರೀಮಂತ ಕಟ್ಟಿಮನಿ, ಅಶೋಕ ಚವ್ಹಾಣ, ಅಜೀತ ಪಾಟೀಲ, ಸಾರಿಗೆ ಇಲಾಖೆ ಅಧಿಕಾರಿಗಳಾದ ನಾಗರಾಜ ಸಿರಾಳಿ, ಎಂ.ಎ. ಖಾದ್ರಿ, ಶಮಿಯೋದ್ದೀನ್‌ ಶಾಹಿನ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next