Advertisement
ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 2ರಲ್ಲಿ ಹಾಗೂ ಮದ್ದುಗುಡ್ಡೆ ವಾರ್ಡ್‌ನಲ್ಲಿ ಗುರುವಾರ ಮನೆ ಮನೆಗೆ ತೆರಳಿ ಕೋಟ ಶ್ರೀನಿವಾಸ ಪೂಜಾರಿಯವರ ಪರವಾಗಿ ಮತ ಯಾಚನೆ ಮಾಡಿದರು.
Related Articles
Advertisement
ಎ. 26ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಗರಿಷ್ಠ ಪ್ರಮಾಣದಲ್ಲಿ ಬಿಜೆಪಿ ಪರ ಮತ ಚಲಾಯಿಸುವ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕುಂದಾಪುರ ಪುರಸಭಾ ಸದಸ್ಯ ರಾಘವೇಂದ್ರ ಖಾರ್ವಿ, ರಮೇಶ್ ಪೂಜಾರಿ, ನಾರಾಯಣ ಖಾರ್ವಿ, ಸತೀಶ್ ಮೇಸ್ತ, ದಶಮಿ ರಾಘವೇಂದ್ರ ಖಾರ್ವಿ, ಮಣಿರಾಜ ಖಾರ್ವಿ, ದಯಾನಂದ ಖಾರ್ವಿ, ಸಂತೋಷ ಖಾರ್ವಿ, ಗುರುರಾಜ್ ಖಾರ್ವಿ, ಪ್ರಶಾಂತ ಖಾರ್ವಿ, ಪ್ರಕಾಶ ಮೊಗವೀರ, ನಾಗೇಶ ಪೂಜಾರಿ, ಮಂಜುನಾಥ ಪೂಜಾರಿ, ರಾಜಕುಮಾರ ಮೇಸ್ತ, ಪವನ ಮದ್ದುಗುಡ್ಡೆ ಹಾಜರಿದ್ದರು.
ಮೋದಿ ಬೆಂಬಲಿಸಲು ಬಿಜೆಪಿ ಗೆಲ್ಲಿಸಿ: ಕೋಟಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 10 ವರ್ಷಗಳಲ್ಲಿ ನೂರಾರು ಜನಪರ ಯೋಜನೆಗಳ ಸಹಿತ 40 ಕೋಟಿ ಜನತೆಯನ್ನು ಬಡತನದ ರೇಖೆಯಿಂದ ಮೇಲೆತ್ತಿದ್ದಾರೆ. ಜತೆಗೆ 70 ಕೋಟಿ ಜನರು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಕೇಂದ್ರ ಸರಕಾರದ ಯೋಜನೆಗಳ ಫಲಗಳನ್ನು ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಗೆ ಮಾಡುವ ಕ್ರಾಂತಿಕಾರಿ ಬದಲಾವಣೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗಿದೆ. ಭಾರತವನ್ನು ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ 5ನೇ ಸ್ಥಾನಕ್ಕೆ ಕೊಂಡೊಯ್ದಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ 5 ವರ್ಷಗಳಲ್ಲಿ ಭಾರತವನ್ನು ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ದಿಕ್ಕಿನಲ್ಲಿ ಶ್ರಮಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಜತೆಗೆ ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಸಚಿವನಾಗಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಭ್ರಷ್ಟಾಚಾರ ರಹಿತವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಭಾರೀ ಅಂತರದಿಂದ ಗೆಲ್ಲಿಸಿ ಆಶೀರ್ವದಿಸಬೇಕು ಎಂದು ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.