Advertisement

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ ದಿನ

09:37 AM Nov 28, 2019 | Hari Prasad |

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಇಂದು ‘ಸಂವಿಧಾನ ದಿನ’ ಆಚರಿಸಲು ನಿರ್ಧರಿಸಲಾಗಿದೆ. ಆ.5ರಂದು ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ರದ್ದು ಬಳಿಕ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ಮಹತ್ವ ಪಡೆದಿದೆ.

Advertisement

ಮಂಗಳವಾರ ಎಲ್ಲ ಸರಕಾರಿ ಕಚೇರಿಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂವಿಧಾನದ ಪೀಠಿಕೆಯನ್ನು ಓದಲಾಗುತ್ತದೆ ಮತ್ತು ಮೂಲಭೂತ ಕರ್ತವ್ಯಗಳನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಗುತ್ತದೆ. ಜತೆಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಮೂಲಭೂತ ಹಕ್ಕುಗಳ ಬಗೆಗಿನ ಕಾರ್ಯಕ್ರಮ ನಡೆಯಲಿದೆ. 1949ರ ನ.26ರಂದು ದೇಶದ ಸಂವಿಧಾನವನ್ನು ಅಂಗೀಕರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next