ಗದಗ: ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿ ಉಳಿವಿಗಾಗಿ ರಾಜ್ಯ ಸರಕಾರ ಅವಿರತವಾಗಿ ಶ್ರಮಿಸುತ್ತಿದೆ. ಕನ್ನಡಿಗರ ಅಭಿವೃದ್ಧಿಗಾಗಿ ಬಡತನ, ನಿರುದ್ಯೋಗ ನಿರ್ಮೂಲನೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕನ್ನಡಿಗರು ಒಗ್ಗಟ್ಟಾಗಬೇಕು ಎಂದು ಗಣಿ, ಭೂ ವಿಜ್ಞಾನ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಕರೆ ನೀಡಿದರು.
64 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ರಕ್ಷಣಾ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಸಮಾರಂಭದಲ್ಲಿ ಜಿ.ಪಂ.ಅಧ್ಯಕ್ಷ ಸಿದ್ದು ಪಾಟೀಲ, ಶಾಸಕ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಸಿಇಓ ಡಾ.ಆನಂದ ಕೆ. ಎಸ್ಪಿ ಶ್ರೀನಾಥ ಜೋಷಿ ಸೇರಿದಂತೆ ಅನೇಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.