Advertisement

DK: ತ್ಯಾಜ್ಯ ಸಮಸ್ಯೆಗೆ ದ.ಕ. ಜಿಲ್ಲಾಡಳಿತದ ಪರಿಹಾರ ಯೋಜನೆ

02:21 AM Oct 01, 2023 | Team Udayavani |

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ಯುಕ್ತವಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣ ಕೇಂದ್ರ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ-ಎಂಆರ್‌ಎಫ್‌) ಘಟಕ ಗಳನ್ನು ನಿರ್ಮಿಸಲು ಮುಂದಾಗಿದೆ.

Advertisement

ಗ್ರಾಮೀಣಾಭಿವೃದ್ಧಿ ಇಲಾಖೆ ಯಡಿ ಎಂಆರ್‌ಎಫ್‌ ಘಟಕ ಜಿಲ್ಲೆಯ ಎಡಪದವಿನಲ್ಲಿ ಈಗಾ ಗಲೇ ಕಾರ್ಯಾ ಚರಿಸುತ್ತಿದೆ. ಬಂಟ್ವಾಳ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿಯೂ ಸಿದ್ಧವಾಗು ತ್ತಿದ್ದು ಶೀಘ್ರ ಕಾರ್ಯಾ ರಂಭಿಸಲಿವೆ. ಆದರೆ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಯಾವುದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘಟಕಗಳಿಲ್ಲ.

ಮಂಗಳೂರು ನಗರಕ್ಕೆ ಹತ್ತಿರವಿರುವ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಸಂಗ್ರಹಿಸಲಾದ ತ್ಯಾಜ್ಯವನ್ನು ಮಹಾನಗರ ಪಾಲಿಕೆಯ ಪಚ್ಚನಾಡಿ ತಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತಿದೆ. ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಗಳ ರಚನೆಯಾಗಿಲ್ಲ. ಪ್ರಯತ್ನ ನಡೆಯು ತ್ತಿದ್ದರೂ ಜಮೀನು ಅಂತಿಮವಾಗಿಲ್ಲ. ಇದು ತಾಜ್ಯ ವಿಲೇವಾರಿ ಪ್ರಕ್ರಿಯೆಗೆ ಅಡ್ಡಿಯಾಗಿದ್ದು, ಮನೆ, ಅಂಗಡಿ, ಹೊಟೇಲ್‌ಗ‌ಳ ತ್ಯಾಜ್ಯ ರಸ್ತೆ ಬದಿಯಲ್ಲಿ ಸಂಗ್ರಹಗೊಂಡು ನಗರದ ಸೌಂದರ್ಯಕ್ಕೆ ಅಡ್ಡಿಯಾಗಿದೆ.

ಆದ್ದರಿಂದ ತ್ಯಾಜ್ಯ ವಿಲೇ ವಾರಿ ಮೂಲಕ ಕಸದ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ನಿವಾರಿಸಲು ಉದ್ದೇಶಿ ಸಲಾಗಿದೆ. ಆ ಹಿನ್ನೆಲೆಯಲ್ಲಿ ಕಾರ್ಕಳ ನಿಟ್ಟೆಯಲ್ಲಿರುವ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ರಾಜ್ಯದ ಮೊದಲ ಎಂಆರ್‌ಎಫ್‌ ಘಟಕಕ್ಕೆ ಅಧಿಕಾರಿಗಳು, ಎಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಸಂಗ್ರಹವಾಗುವ ತಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಘಟಕ ನಿರ್ಮಾಣವಾಗಲಿದೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿದೆ

Advertisement

ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಮಿನಿ ಎಂಆರ್‌ಎಫ್‌ಗಳನ್ನು ನಿರ್ಮಿಸಿ ಘನ ತ್ಯಾಜ್ಯವನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರಸ್ತುತ ಸ್ವಸಹಾಯ ಸಂಘಗಳ ಮೂಲಕ 7 ಘಟಕಗಳು ಕಾರ್ಯಾಚರಿಸುತ್ತಿವೆ. ಉಡುಪಿ ನಗರಸಭೆ ಹೊರತು ಪಡಿಸಿ ಬೇರೆ ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಎಂಆರ್‌ಎಫ್‌ ಘಟಕಗಳಿಲ್ಲ ಎಂದು ಪೌರಾಯುಕ್ತ ರಾಯಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಆರ್‌ಎಫ್‌ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಕಾರ್ಕಳ ನಿಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಘಟಕ್ಕೆ ಎಂಜಿನಿಯರ್‌ಗಳು, ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯನ್ನು ಅವಲೋಕಿಸಲಿದ್ದಾರೆ. ಜಾಗದ ಲಭ್ಯತೆ, ಅನುದಾನ ಮೊದಲಾದವುಗಳನ್ನು ಅವಲಂಬಿಸಿ ಘಟಕ ನಿರ್ಮಿಸಲಾಗುವುದು.
– ಅಭಿಷೇಕ್‌ ವಿ., ಯೋಜನಾ ನಿರ್ದೇಶಕರು, ದ.ಕ. ಜಿಲ್ಲಾ ನಗರಾಭಿವೃದ್ಧಿ ಕೋಶ

 ಭರತ್‌ ಶೆಟ್ಟಿಗಾರ್‌

Advertisement

Udayavani is now on Telegram. Click here to join our channel and stay updated with the latest news.

Next