Advertisement
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮೊಹಮ್ಮದ್ ಅಸಾನ್ ಅಲಿಯಾಸ್ ಅತ್ತಾರ್ವ ರೆಹಮಾನ್ (45 ವ) ಮತ್ತು ಬನಶಂಕರಿಯ ಕಾವೇರಿನ ನಗರ ನಿವಾಸಿ ಶಬೀರ್ (34) ಬಂಧಿತರು. ಆರೋಪಿಗಳು ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಶ್ರೀಧರ್ ಎಂಬಾತನಿಗೆ ಮತಾಂತರ ಮಾಡಿಸಿದ್ದರು. ಆರೋಪಿಗಳ ವಿರುದ್ಧ ಮತಾಂತರ ಹಾಗೂ ಎಸ್ಸಿ ಮತ್ತು ಎಸ್ಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
Related Articles
Advertisement
ಹುಬ್ಬಳ್ಳಿಯಲ್ಲಿ ಪ್ರಕರಣ ಬೆಳಕಿಗೆ: ಈ ಮಧ್ಯೆ ಶ್ರೀಧರ್, ಸಾಮಾಜಿಕ ಜಾಲತಾಣ ಫೇಸ್ ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಲು ಹೋಗಿದ್ದ. ಆಗ ಸ್ಥಳೀಯರು ಈತನಿಗೆ ಥಳಿಸಿ, ಠಾಣೆಗೆ ಕರೆದೊಯ್ದಿದ್ದರು. ಈತನ ವಿಚಾರಣೆ ವೇಳೆ ಮತಾಂತರ ಮಾಡಿಸಿದ್ದಾರೆ. ಜತೆಗೆ ಬಲವಂತವಾಗಿ ದನದ ಮಾಂಸ ತಿನ್ನಸಿದಲ್ಲದೆ, ತನಗೆ ಮೊಹಮ್ಮದ್ ಸಲ್ಮಾನ್ ಎಂದು ಹೆಸರಿಟ್ಟಿದ್ದರು.
ಈ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಬೆಂಗಳೂರಿನಲ್ಲಿ ನಡೆದಿದ್ದರಿಂದ ಬನಶಂಕರಿ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಲ್ಲದೆ, ಶ್ರೀಧರ್ ಪರಿಶಿಷ್ಟ ಸಮುದಾಯಕ್ಕೆ ಸೇರಿದವನಾದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಜಯನಗರ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು