Advertisement

ಮದ್ಯ ಅಕ್ರಮ ಮಾರಾಟ ಕಡಿವಾಣಕ್ಕೆ ಒತ್ತಾಯ

07:34 PM Aug 06, 2022 | Team Udayavani |

ರಾಯಚೂರು: ಸಿರವಾರ ತಾಲೂಕಿನ ಹುಡಾ, ಚಿಂಚರಕಿ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೇ ಸಾಗಿದ್ದು, ಕಡಿವಾಣ ಹಾಕುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಈ ಕುರಿತು ಜಿಲ್ಲಾ ಧಿಕಾರಿ ಅ ಧಿಕಾರಿಗೆ ಮನವಿ ಸಲ್ಲಿಸಿ, ಈ ಭಾಗದ ಗ್ರಾಮಗಳಲ್ಲಿ ಹೆಚ್ಚಾಗಿ ಕೃಷಿಕ ಕುಟುಂಬಗಳೇ ವಾಸಿಸುತ್ತಿದ್ದು, ಬಡ ಮಧ್ಯಮ ವರ್ಗದ ಜನರೇ ಹೆಚ್ಚಾಗಿದ್ದಾರೆ. ಸಕಾಲಕ್ಕೆ ಮಳೆ ಬೆಳೆ ಇಲ್ಲದೇ ಜೀವನ ನಡೆಸುವುದೇ ಕಷ್ಟದ ಸಂದರ್ಭದಲ್ಲಿ ಕುಟುಂಬ ನಡೆಸಬೇಕಾದ ಗಂಡಸರು ಕುಡಿತದ ದಾಸ್ಯಕ್ಕೆ ಸಿಲುಕುತ್ತಿದ್ದಾರೆ. ಇದರಿಂದ ಕುಟುಂಬಗಳು ಬೀದಿ ಪಾಲಾಗುವಂತಾಗಿದೆ ಎಂದರು.

ದುಡಿಯಬೇಕಾದ ಗಂಡಸರು ಕುಡಿದು ಕಂಡಲ್ಲಿ ಬೀಳುತ್ತಿದ್ದರೆ, ಮಹಿಳೆಯರು ದುಡಿದು ಕುಟುಂಬಗಳನ್ನು ನಿರ್ವಹಣೆ ಮಾಡಬೇಕಾದ ಸ್ಥಿತಿ ಎದುರಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬರುತ್ತದೆ. ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಇಲ್ಲವಾದರೆ ಡಿಸಿ ಕಚೇರಿ ಎದುರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಸಿ.ಎಚ್‌. ರವಿಕುಮಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್‌ ಪಾಷಾ ದಿದ್ದಿಗಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಸವರಾಜ್‌, ಜಿಲ್ಲಾ ಗೌರವಾಧ್ಯಕ್ಷೆ ಸಿ.ಎಚ್‌. ರಾಧಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಡೇಸಾಬ್‌, ತಾಲೂಕು ಅಧ್ಯಕ್ಷ ಮಂಜುನಾಥ, ಮಲ್ಲಿಕಾರ್ಜುನ ರೆಡ್ಡಿ ದಿನ್ನಿ, ಸೋಮರೆಡ್ಡಿ, ಅಮ್ಜದ್‌ ಪಾಷಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next