ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ವೇಳೆ ಕಾರೊಂದು ಹರಿದು 4 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಚಿಂತಾಮಣಿಯಲ್ಲಿ ನಡೆದಿದೆ.
ಪಾರ್ಕಿಂಗ್ ಮಾಡಲು ಬಂದ ಕಾರು ಆಟವಾಡುತ್ತಿದ್ದ ಹುಡುಗನ ಮೇಲೆ ಹತ್ತಿದ್ದು, ಕೂಡಲೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಡೆಕ್ಕನ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತಪಟ್ಟ ಬಾಲಕ ವೆಂಕಟೇಶ್ವರಲು ಆವರ ಪುತ್ರ ಗೀತಿಕ ಎಂದು ತಿಳಿದು ಬಂದಿದೆ.
ಮಾಜಿ ಸಚಿವರೊಬ್ಬರ ನಿವಾಸದ ಎದುರೇ ಈ ಘಟನೆ ನಡೆದಿದ್ದು ದ್ರಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದೆ.
ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.