ಉಡುಪಿ : ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ರವರು ಮಾ.19ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
Advertisement
ಮಾ.19 ರವಿವಾರ ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತ ಮತ್ತು ನೀತಿ ನಿರೂಪಣೆಗಳಲ್ಲಿ ತಂದಿರುವ ಸುಧಾರಣೆಗಳ ಕುರಿತು ಪ್ರಬುದ್ಧರ ಗೋಷ್ಠಿ ನಡೆಯಲಿದೆ.