Advertisement

S Jaishankar: ಕೆನಡಾ ವಿವಾದ… ಪ್ರಧಾನಿ ಮೋದಿ ಭೇಟಿಯಾದ ವಿದೇಶಾಂಗ ಸಚಿವ

05:16 PM Sep 20, 2023 | Team Udayavani |

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಬೇಗುದಿಯ ನಡುವೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

Advertisement

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ಕೆನಡಾ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು.

ಇದು ಉಭಯ ದೇಶಗಳ ನಡುವಿನ ಸಂಬಂಧ ಹಳಸುವಂತೆ ಮಾಡಿದ್ದು, ಟ್ರುಡೋ ಹೇಳಿಕೆ ಕೇವಲ ಭಾರತದಲ್ಲಿ ಮಾತ್ರ ಸದ್ದು ಮಾಡದೆ ಉಭಯ ದೇಶಗಳಲ್ಲೂ ವ್ಯಾಪಕ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಭಾರತ-ಕೆನಡಾ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈಶಂಕರ್ ಹೊಸ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Advertisement

Udayavani is now on Telegram. Click here to join our channel and stay updated with the latest news.

Next