Advertisement

ಕುಪ್ವಾರದಲ್ಲಿ ಗಡಿ ನುಸುಳುವಿಕೆಯ ಯತ್ನ ವಿಫಲ; ಓರ್ವ ಉಗ್ರ ಬಲಿ

01:45 PM Oct 26, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ಬುಧವಾರ ವಿಫಲಗೊಳಿಸಿದ್ದು, ಒಬ್ಬ ವಿದೇಶಿ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಎಲ್‌ಒಸಿ ಉದ್ದಕ್ಕೂ ಕರ್ನಾಹ್ ಸೆಕ್ಟರ್‌ನ ಸುದ್ಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ಒಬ್ಬ ವಿದೇಶಿ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅವರು ಹೇಳಿದ್ದಾರೆ.

ಘಟನೆಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next